ರಾಜ್ಯ

ಲೋಕ ಚುನಾವಣೆಗೂ ಮುನ್ನ ಮಂಜುನಾಥನ ದರ್ಶನ ಪಡೆದ ಡಿಸಿಎಂ

ಧರ್ಮಸ್ಥಳ: ಯಾವಾಗಲೂ ಯುದ್ಧ ಆರಂಭಿಸುವ ಮುನ್ನ ಮಂಜುನಾಥನ ದರ್ಶನ ಪಡೆಯುತ್ತೇನೆ. ಅದೇ ರೀತಿ ಈ ಬಾರಿಯೂ ಮಂಜುನಾಥನ ದರ್ಶನಕ್ಕೆ ಬಂದಿದ್ದೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಮಂಗಳವಾರ (ಮಾ.೨೬) ಬೆಳಿಗ್ಗೆ ಧರ್ಮಸ್ಥಳ ದೇಗುಲಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ ಎಂಬ ಮಾತಿದೆ. ನನ್ನ ಜೀವನದಲ್ಲಿ ಮಂಜುನಾಥ, ಈಶ್ವರ, ಗಂಗಾಧರ ಅಜ್ಜ ರಕ್ಷಣೆ ಮಾಡಿದ್ದಾರೆ. ಹಾಗಾಗಿ ಈ ಯುದ್ಧ ಆರಂಭಿಸುವ ಮುನ್ನ ಮಂಜುನಾಥಸ್ವಾಮಿ, ಅಣ್ಣಪ್ಪಸ್ವಾಮಿ ದರ್ಶನ ಮಾಡಿ ಆಶೀರ್ವಾದ ಪಡೆಯುವ ಪದ್ಧತಿ ಇಟ್ಟುಕೊಂಡಿದ್ದೇನೆ ಎಂದು ಹೇಳಿದರು.

ನನ್ನ ಪದ್ಧತಿಯಂತೆ ಇಂದು ಇಲ್ಲಿಗೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದು ಹೋಗುತ್ತೇನೆ. ನಾವು ಐದು ಗ್ಯಾರಂಟಿಗಳನ್ನು ನೀಡಿ ನುಡಿದಂತೆ ನಡೆದಿದ್ದೇವೆ. ಇನ್ನೂ ಹೆಚ್ಚಿಗೆ ಶಕ್ತಿ ನೀಡಿ ಎಂದು ಆ ಭಗವಂತನಲ್ಲಿ ಪ್ರಾರ್ಥನೆ ಮಾಡಲು ಬಂದಿದ್ದೇನೆ. ನುಡಿದಂತೆ ನಡೆಯಲು ಆ ದೇವರು ಶಕ್ತಿ ಕೊಟ್ಟಿದ್ದಾನೆ, ಇದು ನಮ್ಮ ಭಾಗ್ಯ, ಮುಂದೆ ಜನ ತೀರ್ಮಾನ ಮಾಡುತ್ತಾರೆ ಎಂದರು.

ಮಂಜುನಾಥನ ಬಳಿಗೆ ರಾಜ್ಯದ ಮಹಿಳೆಯರು ಉಚಿತವಾಗಿ ಬಂದಿದ್ದಾರೆ. ವ್ಯಾಪಾರ ವಹಿವಾಟು ಜೋರಿದೆ. ಎಲ್ಲರೂ ತೀರ್ಥಯಾತ್ರೆ, ಧರ್ಮಾ ಯಾತ್ರೆ ಮಾಡುತ್ತಿದ್ದಾರೆ. ಇದಕ್ಕೆಲ್ಲ ಕಾರಣ ಜನ ಕೊಟ್ಟ ಶಕ್ತಿ ಅವರಿಗೆ ಋಣವನ್ನು ತೀರಿಸಿದ್ದೇವೆ. ಆ ಉಪಕಾರ ಸ್ಮರಣೆಯನ್ನು ಇಟ್ಟುಕೊಳ್ಳುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು.

ಧರ್ಮಸ್ಥಳ ಮಂಜುನಾಥನ ದರ್ಶನ ಪಡೆದ ಬಳಿಕ ಡಿಕೆ ಶಿವಕುಮಾರ್‌ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಸುಬ್ರಹ್ಮಣ್ಯ ದೇವರ ದರ್ಶನ ಪಡೆದರು. ಈ ವೇಳೆ ಸ್ಥಳೀಯ ಕಾಂಗ್ರೇಸ್‌ ನಾಯಕರೊಡನೆ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.

ಲೋಕಸಭೆ ಚುನಾವಣೆಯ ಕಣ ರಂಗೇರುತ್ತಿರುವ ಮಧ್ಯಯೇ ಡಿಸಿಎಂ ಡಿಕೆ ಶಿವಕುಮಾರ್‌ ಇಂದು ಇಡೀ ದಿನ ಟೆಂಪನ್‌ ರನ್‌ ಆರಂಭಿಸಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹಡಗುಗಳ ಮೇಲಿನ ಶುಲ್ಕ ನಿಲ್ಲಿಸಿ ; ಇರಾನ್‌ಗೆ ಟ್ರಂಪ್ ಸೂಚನೆ

ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…

23 mins ago

ನಂಜನಗೂಡು | ದೇವರಾಯಶೆಟ್ಟಿಪುರದಲ್ಲಿ ಚಿರತೆ ಪ್ರತ್ಯಕ್ಷ ; ಗ್ರಾಮಸ್ಥರಲ್ಲಿ ಆತಂಕ

ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…

27 mins ago

ಹನೂರು | ಪ್ರತ್ಯೇಕ ಮನೆಕಳ್ಳತನ ; ಐವರ ಬಂಧನ

ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…

2 hours ago

ವರದಿ ಬಿಟ್ಟು ಕ್ಷೇತ್ರ ಭೇಟಿ ಮಾಡಿ : ಅಧಿಕಾರಿಗಳಿಗೆ ಎಚ್‌ಡಿಕೆ ಸೂಚನೆ

ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…

2 hours ago

ಗೆಲ್ಲಿಸಿಕೊಂಡು ಬರಲಿ ನೋಡೋಣ : ಸಿಎಂ ಸಿದ್ದರಾಮಯ್ಯಗೆ ಎಚ್‌ಡಿಕೆ ಸವಾಲು

ಮೈಸೂರು : ನಾನು ಅಹಿಂದ ಚಾಂಪಿಯನ್‌ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್‌ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…

2 hours ago

ಪಶ್ಚಿಮ ಬಿಕ್ಕಟ್ಟು : ಸಂಘರ್ಷ ಸಂಧಾನ ಸಭೆ ಮುಂದೂಡಿಕೆ?

ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…

3 hours ago