Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಅಮೆರಿಕಾ ಪ್ರವಾಸ ಬಗ್ಗೆ ಸ್ಪಷ್ಟನೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್‌ ಅವರು ಈ ಬಾರಿ ಡೆಮಾಕ್ರಟಿಕ್‌ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.

ಹೀಗಾಗಿ, ಕಮಲ ಹ್ಯಾರಿಸ್‌ ಅವರು ಆಯೋಜಿಸಿರುವ ರಾಜಕೀಯ ಸಂವಾದದಲ್ಲಿ ಹಾಗೂ ಇತರ ಕಾರ್ಯಕ್ರಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ಗೂ ಆಹ್ವಾನ ಬಂದಿದ್ದು, ಅದಕ್ಕಾಗಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

ಸದ್ಯ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್‌ ಸಾಮಾಜಿಕ ಜಾಲತಾಣ ಎಕ್ಸ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.

ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.

Tags: