ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್ ಅವರು ಈ ಬಾರಿ ಡೆಮಾಕ್ರಟಿಕ್ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ.
ಹೀಗಾಗಿ, ಕಮಲ ಹ್ಯಾರಿಸ್ ಅವರು ಆಯೋಜಿಸಿರುವ ರಾಜಕೀಯ ಸಂವಾದದಲ್ಲಿ ಹಾಗೂ ಇತರ ಕಾರ್ಯಕ್ರಮಗಳಿಗೆ ಡಿಸಿಎಂ ಡಿಕೆ ಶಿವಕುಮಾರ್‌ಗೂ ಆಹ್ವಾನ ಬಂದಿದ್ದು, ಅದಕ್ಕಾಗಿ ಅಮೆರಿಕಾ ಪ್ರವಾಸ ಕೈಗೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಸದ್ಯ ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಸಾಮಾಜಿಕ ಜಾಲತಾಣ ಎಕ್ಸ್ ಮೂಲಕ ಸ್ಪಷ್ಟನೆ ನೀಡಿದ್ದಾರೆ. ನಾನು ಕೈಗೊಳ್ಳುತ್ತಿರುವ ಅಮೆರಿಕ ಪ್ರವಾಸಕ್ಕೆ ಸಂಬಂಧಿಸಿದಂತೆ ಹರಿದಾಡುತ್ತಿರುವ ವದಂತಿಗಳ ಬಗ್ಗೆ ನನ್ನ ಸ್ಪಷ್ಟನೆ ಇದು. ಈ ಪ್ರವಾಸವು ವೈಯಕ್ತಿಕವಾಗಿದ್ದು, ಯಾವುದೇ ರಾಜಕೀಯ ಉದ್ದೇಶವನ್ನು ಹೊಂದಿಲ್ಲ. ಅಥವಾ ನನಗೆ ಯಾವುದೇ ರಾಜಕೀಯ ಆಹ್ವಾನಗಳೂ ಬಂದಿಲ್ಲ.
ಸಾರ್ವಜನಿಕರು ಯಾವುದೇ ರೀತಿಯ ಊಹಾಪೋಹಗಳಿಗೆ ಕಿವಿಗೊಡದಂತೆ ವಿನಂತಿಸುತ್ತೇನೆ ಎಂದು ಅವರು ಬರೆದುಕೊಂಡಿದ್ದಾರೆ.
ಭಾಷಾ ಸ್ವಾತಂತ್ರ್ಯದ ಮೇಲಿನ ಪ್ರಹಾರ : ಸಿಎಂ ಸಿದ್ದರಾಮಯ್ಯ ಆಕ್ರೋಶ ಬೆಂಗಳೂರು : ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ಮಸೂದೆ ವಾಪಸ್ ದ್ವೇಷ ಭಾಷಣ, ಅಪರಾಧಗಳ ಪ್ರತಿಬಂಧಕ ಮಸೂದೆಯೂ ಹಿಂದಕ್ಕೆ ಬೆಂಗಳೂರು :…
ಎರಡು ದಶಕಗಳ ಕೂಗು,ಬೇಡಿಕೆ ಈಡೇರಿಕೆ ಮೈಸೂರು : ಮೈಸೂರಿನ ಲಕ್ಷಾಂತರ ಜನರ ಎರಡು ದಶಕದ ಕನಸು, ಬೇಡಿಕೆ ನನಸಾಗುವ ಕಾಲ…
ಬೆಂಗಳೂರು : ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ…
ನಂಜನಗೂಡು : ಎರಡು ವರ್ಷಗಳಿಂದ ಪತ್ನಿಯಿಂದ ದೂರವಾಗಿದ್ದ ಪತಿ ರಾತ್ರೋರಾತ್ರಿ ದಿಢೀರನೆ ಪ್ರತ್ಯಕ್ಷವಾಗಿ ಪತ್ನಿಯನ್ನು ಕೊಂದಿರುವ ಘಟನೆ ನಂಜನಗೂಡು ತಾಲೂಕಿನ…
ನಂಜನಗೂಡು : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ ಆದಷ್ಟು ಬೇಗ ಸಮಸ್ಯೆಗಳಿಗೆ ಸ್ಪಂದಿಸುವ…