ಮಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ವಾಕ್ಸಮರ ಮುಂದುವರೆದಿದ್ದು, ನಾನು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿಗಿಂತ ಮೊದಲೇ ನೋಡಿದವನು ಎಂದು ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಾನು ಏನೂ ಮಾಡಿದ್ದೇನೆ ಎಂಬುದು ಕುಮಾರಸ್ವಾಮಿಯವರಿಗೇನು ಗೊತ್ತು. ಅವರು ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ. ಅವರು ಬಹಳ ತಡವಾಗಿ ರಾಜಕೀಯಕ್ಕೆ ಬಂದವರು. ನಾನು 1985ರ ಲೋಕಸಭಾ ಚುನಾವಣೆ ಎದುರಿಸಿದವನು. ಅವರು 1995ರ ಬಳಿಕ ರಾಜಕೀಯ ಪ್ರವೇಶಿಸಿದವರು. ಅವರಿಗಿಂತ 10ವರ್ಷಕ್ಕಿಂತ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಟಾಂಗ್ ಕೊಟ್ಟಿದ್ದಾರೆ.