ರಾಜ್ಯ

ನಾನು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿಗಿಂತ ಮೊದಲೇ ನೋಡಿದವನು: ಹೆಚ್ಡಿಕೆ ವಿರುದ್ಧ ಡಿಕೆಶಿ ವಾಗ್ದಾಳಿ

ಮಂಗಳೂರು : ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಬಗ್ಗೆ ವಾಕ್ಸಮರ ಮುಂದುವರೆದಿದ್ದು, ನಾನು ಚನ್ನಪಟ್ಟಣ ಕ್ಷೇತ್ರವನ್ನು ಕುಮಾರಸ್ವಾಮಿಗಿಂತ ಮೊದಲೇ ನೋಡಿದವನು ಎಂದು ಹೆಚ್‌ ಡಿ ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಾನು ಏನೂ ಮಾಡಿದ್ದೇನೆ ಎಂಬುದು ಕುಮಾರಸ್ವಾಮಿಯವರಿಗೇನು ಗೊತ್ತು. ಅವರು ಚನ್ನಪಟ್ಟಣ ನೋಡೋದಕ್ಕೆ ಮೊದಲೇ ನಾನು ನೋಡಿದ್ದೇನೆ. ಅವರು ಬಹಳ ತಡವಾಗಿ ರಾಜಕೀಯಕ್ಕೆ ಬಂದವರು. ನಾನು 1985ರ ಲೋಕಸಭಾ ಚುನಾವಣೆ ಎದುರಿಸಿದವನು. ಅವರು 1995ರ ಬಳಿಕ ರಾಜಕೀಯ ಪ್ರವೇಶಿಸಿದವರು‌. ಅವರಿಗಿಂತ 10ವರ್ಷಕ್ಕಿಂತ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಟಾಂಗ್ ಕೊಟ್ಟಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಎಚ್‌.ಡಿ.ಕೋಟೆ: ಗುಜರಿ ಗೋಡೌನ್‌ಗೆ ಬೆಂಕಿ: ಲಕ್ಷಾಂತರ ರೂ ಬೆಲೆಬಾಳುವ ಸಾಮಗ್ರಿ ನಾಶ

ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…

2 hours ago

ವಂದೇ ಭಾರತ್‌ ರೈಲಿನಲ್ಲಿ ಕೊಟ್ಟ ಮೊಸರಿನಲ್ಲಿ ಹುಳು ಪತ್ತೆ: IRCTCಗೆ 10 ಲಕ್ಷ ರೂ ದಂಡ

ಪಾಟ್ನಾ: ವಂದೇ ಭಾರತ್‌ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…

2 hours ago

ಹನೂರು: ಬಿಆರ್‌ಟಿ ವನ್ಯಜೀವಿ ವ್ಯಾಪ್ತಿಯಲ್ಲಿ ಕಾಡ್ಗಿಚ್ಚು: 80 ಎಕರೆಗೂ ಹೆಚ್ಚು ಅರಣ್ಯ ನಾಶ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…

2 hours ago

ಪಾಲಿಕೆ ಬಜೆಟ್‌ ಸತ್ವ ಇಲ್ಲದ ಬಜೆಟ್‌: ಮಾಜಿ ಮೇಯರ್‌ ಶಿವಕುಮಾರ್‌ ಆಕ್ರೋಶ

ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…

2 hours ago

ಗುಂಡ್ಲುಪೇಟೆ| ಮದ್ದೂರು ವಲಯದಲ್ಲಿ ಮತ್ತೆರಡು ಹುಲಿ ಪ್ರತ್ಯಕ್ಷ

ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…

3 hours ago

ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ: ಆರ್‌.ಅಶೋಕ್‌ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಬಜೆಟ್‌ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…

3 hours ago