ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಸಿಎಂ-ಡಿಸಿಎಂ ನಡುವೆ ಸಿಎಂ ಕುರ್ಚಿಗಾಗಿ ಕದನ ತಾರಕಕ್ಕೇರುತ್ತಿದ್ದು, ಶಾಸಕರ ಬೆಂಬಲ ಪಡೆಯುವ ಸಂಬಂಧ ಚಟುವಟಿಕೆಗಳು ಚುರುಕುಗೊಂಡಂತೆ ಕಾಣುತ್ತಿದೆ.
ಅತ್ತ ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಸಚಿವರು, ಶಾಸಕರು ದಿಲ್ಲಿಯಲ್ಲಿ ಲಾಬಿ ನಡೆಸಲು ಯತ್ನಿಸುತ್ತಿದ್ದರೆ, ಇತ್ತ ಸಿಎಂ ಆಪ್ತ ಶಾಸಕರು, ಸಚಿವರು ಬೆಂಗಳೂರಿನಲ್ಲಿ ಸಭೆ ನಡೆಸಿದ್ದಾರೆ.
ಈ ಮಧ್ಯೆ ಜೈಲಿನಲ್ಲಿರುವ ಶಾಸಕರಾದ ವಿನಯ್ ಕುಲಕರ್ಣಿ ಹಾಗೂ ವೀರೇಂದ್ರ ಪಪ್ಪಿ ಅವರೊಂದಿಗೆ ಚರ್ಚೆ ನಡೆಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಪರಪ್ಪನ ಅಗ್ರಹಾರ ಜೈಲಿಗೆ ದಿಢೀರ್ ಭೇಟಿ ನೀಡಿದ್ದರು.
ಇದನ್ನೂ ಓದಿ:-ಮೈಸೂರಿನ ಈ ಪ್ರದೇಶಗಳಲ್ಲಿ ನ.23 ರಂದು ವಿದ್ಯುತ್ ವ್ಯತ್ಯಯ
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ, ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವೀರೇಂದ್ರ ಪಪ್ಪಿ ಜೈಲು ಸೇರಿದ್ದಾರೆ. ಈ ಹಿಂದೆಯೇ ನವೆಂಬರ್ ಕ್ರಾಂತಿ ಆಗಲಿದೆ ಎಂಬ ಸುದ್ದಿ ವ್ಯಾಪಕವಾಗಿತ್ತು. ಆದರೆ ಈಗ ನವೆಂಬರ್ ಕ್ರಾಂತಿಗೆ ಸಂಬಂಧಿಸಿದ ಚಟುವಟಿಕೆಗಳು ಆರಂಭವಾಗಿವೆ. ಶಾಸಕರ ಬೆಂಬಲ ಪಡೆಯುವ ನಿಟ್ಟಿನಲ್ಲಿ ಸಕ್ರಿಯರಾಗಿರುವ ಡಿ.ಕೆ. ಶಿವಕುಮಾರ್, ಇಬ್ಬರು ಶಾಸಕರ ಜೊತೆ ಮಾತನಾಡಲು ತೆರಳಿದ್ದಾರಾ ಎಂಬ ಚರ್ಚೆಗಳು ಶುರುವಾಗಿವೆ.





