ರಾಜ್ಯ

ಕಾವೇರಿ ನದಿ ನೀರಿನ ಮಾಲಿನ್ಯದ ಬಗ್ಗೆ ವರದಿ ನೀಡಲು ಡಿಸಿಎಂ ಆದೇಶ

ಬೆಂಗಳೂರು: ನಾಡಿನ ಜೀವನದಿ ಕಾವೇರಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು ಮಾಲಿನ್ಯ ತಡೆಗೆ ಕ್ರಮಕೈಗೊಳ್ಳಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಡಿಸಿಎಂ ಡಿ.ಕೆ ಶಿವಕುಮಾರ್‌ ಗೆ ಮನವಿ ಮಾಡಿದ್ದರು. ಇದೀಗ ದಿನೇಶ್ ಗೂಳಿಗೌಡ ಮನವಿಗೆ ಡಿ.ಕೆ.ಶಿವಕುಮಾರ್ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ, ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆಯಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ.

ಕಾವೇರಿ ನದಿಗೆ ತ್ಯಾಜ್ಯ ಮಿಶ್ರಿತ ನೀರು ಪೂರೈಕೆ ಆಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿ, ತ್ಯಾಜ್ಯ ಮಿಶ್ರಿತ ನೀರು ತಡೆಗೆ ಕ್ರಮವಹಿಸಿ ತನಿಖಾ ತಂಡ ರಚನೆ ಮಾಡುವಂತೆ ಶಾಸಕ ದಿನೇಶ್ ಗೂಳಿಗೌಡ ಸಿಎಂ ಡಿಸಿಎಂಗೆ ಮನವಿ ಮಾಡಿದ್ದರು. ಈ ಮನವಿಗೆ ಸರ್ಕಾರ ತ್ವರಿತವಾಗಿ ಸ್ಪಂದಿಸುವ ಮೂಲಕ ಮಾಲಿನ್ಯಗೊಳ್ಳುತ್ತಿರುವ ಕಾವೇರಿ ನದಿಯ ಶುದ್ಧೀಕರಣಕ್ಕೆ ಸರ್ಕಾರ ಕಾರ್ಯಪ್ರವೃತ್ತವಾದಂತಿದೆ.

ಈ ಸಂಬಂಧ ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಬಗ್ಗೆ ಚರ್ಚಿಸಿ ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.

ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರು, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಲಿಖಿತವಾಗಿ ಆದೇಶಿಸಿದ್ದಾರೆ.

ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು, ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ್ದು ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಮಿತಿ ರಚಿಸಿ ಎರಡು ವಾರದಲ್ಲಿ ಸವಿಸ್ತಾರ ವರದಿ ಸಲ್ಲಿಸಲು ಕ್ರಮಕೈಗೊಳ್ಳುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಇನ್ನು ಈ ವಿಚಾರವಾಗಿ ಡಿಸಿಎಂ ಮತ್ತು ಕೈಗಾರಿಕಾ ಸಚಿವರ ಆದೇಶದ ಕುರಿತಂತೆ ಪ್ರತಿಕ್ರಿಯಿಸಿರುವ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರು, ಈ ಕುರಿತು ಪರಿಶೀಲಿಸಿ,‌ ಚರ್ಚಿಸಿ  ಕಡತ ಮಂಡಿಸುವುದಾಗಿ ತಿಳಿಸಿದ್ದಾರೆ.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

5 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

6 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

8 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

10 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

10 hours ago