ಬೆಂಗಳೂರು: ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಹಿರಿಯ ವೈದ್ಯರ ತಂಡ ಆರೋಗ್ಯ ತಪಾಸಣೆ ನಡೆಸುತ್ತಿದೆ. ರಕ್ತ ಪರೀಕ್ಷೆ, ಇಸಿಜಿ ಸೇರಿದಂತೆ ಅಗತ್ಯ ವೈದ್ಯಕೀಯ ಪರೀಕ್ಷೆಗಳಿಗೆ ಒಳಪಡಿಸಲಾಗಿದೆ.
ಪರಮೇಶ್ವರ್ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಸದ್ಯ ಪರಮೇಶ್ವರ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.



