ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಅಂಗಡಿಗಳಲ್ಲಿಯೂ ಶೇ 60 ರಷ್ಟು ಕನ್ನಡ ನಾಮಫಲಕ ಕಡ್ಡಾಯವಾಗಿರಬೇಕು. 2024ರ ಫೆಬ್ರುವರಿ 28ರೊಳಗೆ ಅಂಗಡಿಗಳ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕನ್ನಡ ನಾಮಫಲಕ ಅಳವಡಿಸುವ ಸಂಬಂಧ ಕರವೇ ಸಂಘಟನೆ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ ಇಂದು (ಗುರುವಾರ) ಸಭೆ ಮಾಡಿದೆ. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾಮಫಲಕಗಳು ಶೇಕಡಾ 50ರಷ್ಟು ಕನ್ನಡದಲ್ಲೇ ಇರಬೇಕು. ಬಾಕಿ ಅರ್ಧದಷ್ಟು ಬೇರೆ ಭಾಷೆಯಲ್ಲಿಯರಬೇಕು ಎಂಬ ಬಗ್ಗೆ 2018ರಲ್ಲಿಯೇ ಸುತ್ತೋಲೆ ಹೊರಡಿಸಲಾಗಿದೆ. ಆದರೆ, ಇದೀಗ ಶೇ.60ರಷ್ಟು ಕನ್ನಡದಲ್ಲಿಯೇ ಬೋರ್ಡ್ ಇರಬೇಕೆಂದು ಅದಕ್ಕೆ ತಿದ್ದುಪಡಿ ತರುವುದಕ್ಕೆ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ. ಇದರನ್ವಯ ಎಲ್ಲಾ ಅಂಗಡಿಗಳು 2024ರ ಫೆ.28ರೊಳಗೆ ಬೋರ್ಡ್ ಚೇಂಜ್ ಮಾಡಬೇಕು. ಜಾಹೀರಾತುಗಳಲ್ಲೂ ಸರ್ಕಾರದ ನಿಯಮ ಪಾಲಿಸಬೇಕು. ನಿಯಮ ಜಾರಿಗೆ ವಿಳಂಬ ಆಗಿರುವುದು ನಿಜ. ಇನ್ನು ಮುಂದೆ ವಿಳಂಬ ಮಾಡದಂತೆ ಕ್ರಮ ವಹಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು.
ಕರವೇ ಕಾರ್ಯಕರ್ತರ ಹೋರಾಟಕ್ಕೆ ಸಂಬಂಧಿಸಿದಂತೆ, ನ್ಯಾಯಯುತ ಹೊರಟಕ್ಕೆ ನಮ್ಮ ಸರ್ಕಾರದ ವಿರೋಧವಿಲ್ಲ. ಯಾರೇ ಆದರೂ ಕಾನೂನು ಪ್ರಕಾರ ನಡೆದುಕೊಳ್ಳಬೇಕು. ಶಾಮತಿಯುತವಾಗಿ ಹೋರಾಟ ಮಾಡಬೇಕು. ಯಾರು ಕೂಡಾ ಕಾನೂನು ಕೈಗೆತ್ತಿಕೊಳ್ಳಬಾರದು. ಕಾನೂನಿ ವಿರುದ್ಧ ಹೋರಾಟ ಮಾಡಿದರೇ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.
ಕರ್ನಾಟಕದಲ್ಲಿ ಕನ್ನಡ ಸಾರ್ವಭೌಮ ಭಾಷೆಯಾಗಿದ್ದು, ಇದರಲ್ಲಿ ಯಾವುದೇ ರಾಜಿಯಿಲ್ಲ. ಕರ್ನಾಟಕದಲ್ಲಿ ಕನ್ನಡವೇ ಆಡಳಿತ ಭಾಷೆ. ಕನ್ನಡ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕನ್ನಡ ಸಂಬಂಧ ಸರ್ಕಾರದ ಕಾನೂನು ಮತ್ತು ನಿಯಮಗಳನ್ನು ತಪ್ಪದೇ ಪಾಲಿಸಬೇಕು. ಇದು ಕರ್ನಾಟಕ ರಾಜ್ಯಕ್ಕೆ ಅನ್ವಯವಾಗಲಿದೆ ಎಂದು ಸಿಎಂ ಸ್ಪಷ್ಟಪಡಿಸಿದರು.
ಇನ್ನು ನಾಪಫಲಕ ಬಗ್ಗೆ ಕರವೇ ಪ್ರತಿಭಟನೆ ಬಗ್ಗೆ ಸಿಎಂ, ಕರವೇ ಯವರು ಮನವಿ ಕೊಟ್ಟಿದ್ರೆ ಪೊಲೀಸರು ಉತ್ತರಿಸುತ್ತಿದ್ದರು. ನನಗೂ ಬಂದಿಲ್ಲ, ಗೃಹ ಸಚಿವರಿಗೂ ಮನವಿ ಬಂದಿಲ್ಲ. ಯಾವುದೇ ಮನವಿ ಕೊಡದೇ ಪ್ರತಿಭಟನೆ ಮಾಡಿದ್ದಾರೆ ಎಂದು ಪ್ರತಿಕ್ರಿಯಿಸಿದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…