Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಚಾರಣ ತಂದ ಮರಣ: 9 ಮಂದಿ ಕನ್ನಡಿಗರ ಸಾವು

ಬೆಂಗಳೂರು: ಉತ್ತರಾಖಂಡ್‌ನ ಸಹಸ್ರತಾಲ್‌ಗೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 23 ಮಂದಿ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.

23 ಮಂದಿ ಪೈಕಿ 11 ಜನರನ್ನು ರಕ್ಷಿಸಿದ್ದು, ಉಳಿದವರನ್ನು ಹೊರ ತೆಗೆಯುವ ಕಾರ್ಯಚರಣೆ ನಡೆಯುತ್ತಿದೆ.  ಐವರ ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು,  ಈ ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನು ತಿಳಿದುಬಂದಿಲ್ಲ.

ಉತ್ತರಾಖಂಡ್‌ ಘರ್ವಾಲ್‌ ಪರ್ವತ ಶ್ರೇಣಿಗಳಲ್ಲಿರುವ ಸಹಸ್ರ ತಾಳ್‌ ಶಿಖರದ ಚಾರಣಕ್ಕೆ ಬೆಂಗಳೂರಿನ ಕನ್ನಡಿಗರ ಚಾರಣಕ್ಕೆ ತೆರಳಿದ್ದ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದಾರೆ. ಈ ಮಾಹಿತಿ ತಿಳಿಯುತ್ತಿದಂತೆ ರಕ್ಷಣಾ ಕಾರ್ಯದ ಮೂಲಕ 11 ಜನರನ್ನು ರಕ್ಷಣೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ
ಇನ್ನು ಘಟನೆ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದ್ದು, ತಕ್ಷಣ ಸ್ಪಂದಿಸಿದ ಕರ್ನಾಟಕ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಬೆಂಗಳೂರಿನಿಂದ ಡೆಹ್ರಾಡೂನ್‌ಗೆ ತೆರಳಿದ್ದಾರೆ.

ಚಾರಣಿಗರ ರಕ್ಷಣೆಗಾಗಿ ವಾಯುಪಡೆ ಹೆಲಿಕಾಪ್ಟರ್‌ ಉತ್ತರ ಕಾಶಿ ತಲುಪಿವೆ. ಸಚಿವ ಕೃಷ್ಣಭೈರೇಗೌಡ ಸ್ಥಳದಲ್ಲಿದ್ದು, ಉತ್ತರಾಖಂಡ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.

Tags: