ಬೆಂಗಳೂರು: ಉತ್ತರಾಖಂಡ್‌ನ ಸಹಸ್ರತಾಲ್‌ಗೆ ಚಾರಣಕ್ಕೆ ತೆರಳಿದ್ದ ಬೆಂಗಳೂರಿನ 23 ಮಂದಿ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದು, ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.
23 ಮಂದಿ ಪೈಕಿ 11 ಜನರನ್ನು ರಕ್ಷಿಸಿದ್ದು, ಉಳಿದವರನ್ನು ಹೊರ ತೆಗೆಯುವ ಕಾರ್ಯಚರಣೆ ನಡೆಯುತ್ತಿದೆ. ಐವರ ಮೃತ ದೇಹಗಳನ್ನು ಹೊರ ತೆಗೆಯಲಾಗಿದ್ದು, ಈ ದುರಂತದಲ್ಲಿ ಮೃತಪಟ್ಟವರ ಗುರುತು ಇನ್ನು ತಿಳಿದುಬಂದಿಲ್ಲ.
ಉತ್ತರಾಖಂಡ್ ಘರ್ವಾಲ್ ಪರ್ವತ ಶ್ರೇಣಿಗಳಲ್ಲಿರುವ ಸಹಸ್ರ ತಾಳ್ ಶಿಖರದ ಚಾರಣಕ್ಕೆ ಬೆಂಗಳೂರಿನ ಕನ್ನಡಿಗರ ಚಾರಣಕ್ಕೆ ತೆರಳಿದ್ದ ವೇಳೆ ಹವಾಮಾನ ವೈಪರೀತ್ಯದಿಂದಾಗಿ ಹಿಮದ ನಡುವೆ ಸಿಲುಕಿದ್ದಾರೆ. ಈ ಮಾಹಿತಿ ತಿಳಿಯುತ್ತಿದಂತೆ ರಕ್ಷಣಾ ಕಾರ್ಯದ ಮೂಲಕ 11 ಜನರನ್ನು ರಕ್ಷಣೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಸಚಿವ ಕೃಷ್ಣಭೈರೇಗೌಡ ಭೇಟಿ
ಇನ್ನು ಘಟನೆ ಬಗ್ಗೆ ಕರ್ನಾಟಕ ಸರ್ಕಾರಕ್ಕೆ ಮಾಹಿತಿ ರವಾನಿಸಲಾಗಿದ್ದು, ತಕ್ಷಣ ಸ್ಪಂದಿಸಿದ ಕರ್ನಾಟಕ ಸರ್ಕಾರ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷರಾಗಿರುವ ಕಂದಾಯ ಸಚಿವ ಕೃಷ್ಣಭೈರೇಗೌಡ ಅವರು ಬೆಂಗಳೂರಿನಿಂದ ಡೆಹ್ರಾಡೂನ್‌ಗೆ ತೆರಳಿದ್ದಾರೆ.
ಚಾರಣಿಗರ ರಕ್ಷಣೆಗಾಗಿ ವಾಯುಪಡೆ ಹೆಲಿಕಾಪ್ಟರ್ ಉತ್ತರ ಕಾಶಿ ತಲುಪಿವೆ. ಸಚಿವ ಕೃಷ್ಣಭೈರೇಗೌಡ ಸ್ಥಳದಲ್ಲಿದ್ದು, ಉತ್ತರಾಖಂಡ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…