Mysore
22
haze

Social Media

ಶುಕ್ರವಾರ, 05 ಡಿಸೆಂಬರ್ 2025
Light
Dark

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳ ಸಾವು: ತನಿಖೆಗೆ ಈಶ್ವರ್‌ ಖಂಡ್ರೆ ಆದೇಶ

ಬೆಳಗಾವಿ: ಜಿಲ್ಲೆಯ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ 19 ಜಿಂಕೆಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ತನಿಖೆಗೆ ಆದೇಶ ಹೊರಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು, ಪ್ರಾಥಮಿಕ ವರದಿಗಳ ಪ್ರಕಾರ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿವೆ ಎಂದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಮೃಗಾಲಯದ ಬೇರೆ ಯಾವುದೇ ಪ್ರಾಣಿಗಳಿಗೂ ಸೋಂಕು ತಗುಲದಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಇದನ್ನು ಓದಿ: ಮೃಗಾಲಯ ಪ್ರವೇಶ ದರ ಹೆಚ್ಚಳಕ್ಕೆ ವಿರೋಧ

ಈ ಜಿಂಕೆಗಳು ಕಲುಷಿತ ನೀರು, ಆಹಾರ ಸೇವಿಸಿ ಕಾಯಿಲೆಗೆ ತುತ್ತಾಗಿ ಮೃತಪಟ್ಟಿವೆಯೇ ಅಥವಾ ಬೆಕ್ಕು ಹಾಗೂ ಇನ್ನಿತರ ಸಾಕು ಪ್ರಾಣಿಗಳಿಂದ ಕಾಯಿಲೆ ಹರಡಿದೆಯೇ ಎಂಬುದರ ಬಗ್ಗೆ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.

ಈ ಘಟನೆ ಸಂಭವಿಸಲು ಸಿಬ್ಬಂದಿಯ ನಿರ್ಲಕ್ಷ್ಯವಿದ್ದಲ್ಲಿ ನಿಯಮಾನುಸಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆದೇಶ ನೀಡಿದ್ದಾರೆ.

Tags:
error: Content is protected !!