ಬೆಳಗಾವಿ: ಬಳ್ಳಾರಿ ಸರ್ಕಾರಿ ಆಸ್ಪತ್ರೆಯಲ್ಲಿನ ಬಾಣಂತಿಯರ ಸಾವಿನ ನಿಜಾಂಶಗಳ ಬಗ್ಗೆ ನಾವು ಅಧಿವೇಶನದಲ್ಲಿ ಚರ್ಚೆ ಮಾಡುತ್ತೇವೆ. ಆದರೆ ವಿಪಕ್ಷಗಳು ಸಾವು ಮುಂದಿಟ್ಟುಕೊಂಡು ರಾಜಕೀಯ ಮಾಡಬಾರದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಪಕ್ಷಗಳ ವಿರುದ್ಧ ಕಿಡಿಕಾರಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಭಾಗವಹಿಸುವ ಮುನ್ನ ಮಾದ್ಯಮಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ಪ್ರತಿ ವರ್ಷವೂ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ, ನವಜಾತ ಶಿಶುಗಳು ಮರಣ ಇದ್ದದ್ದೆ. ಇದಕ್ಕೆ ಅಪೌಷ್ಠಿಕತೆ, ನ್ಯೂಮೋನಿಯಾ, ಅವಧಿಪೂರ್ವ ಹೆರಿಗೆ, ವೈದ್ಯಕೀಯ ಸೌಲಭ್ಯಗಳ ವಿಫಲತೆ ಕೂಡ ಇರಬಹುದು. ಇದನ್ನೆ ಮುಂದಿಟ್ಟುಕೊಂಡು ಪ್ರತಿಪಕ್ಷಗಳು ತಮ್ಮ ರಾಜಕೀಯ ಮಾಡಬಾರದು ಎಂದು ಹೇಳಿದರು.
ಅಧಿವೇಶನದಲ್ಲಿ ಬಾಣಂತಿಯರ ಸಾವು ಕುರಿತು ಗಂಭಿರ ಚರ್ಚೆ ಆಗಬೇಕು. ನಾವು ಸಹ ಚರ್ಚೆಗೆ ಸಿದ್ಧವಿದ್ದೇವೆ. ನಿಜಾಂಶಗಳ ಕುರಿತು ಅಧಿವೇಶನದಲ್ಲಿ ಬೆಳಕು ಚೆಲ್ಲುತ್ತೇವೆ. ಬಾಣಂತಿಯರ ಮರಣದ ವಿಷಯದಲ್ಲಿ ಸಂಪೂರ್ಣವಾಗಿ ವೈದ್ಯಕೀಯ ವಿಫಲತೆಯಿದೆ ಎಂದು ವಿಪಕ್ಷಗಳು ರಾಜಕೀಯ ಮಾಡಬಾರದು ಎಂದರು.
ಬಳ್ಳಾರಿ ಸರ್ಕಾರಿ ಆಸ್ಪತ್ರೆಯ ಬಾಣಂತಿಯರ ಮರಣದ ವಿಚಾರವಾಗಿ ನಮಗೆ ತುಂಬಾ ನೋವಾಗಿದೆ. ಹೀಗಾಗಿ ಸರ್ಕಾರ ಎಚ್ಚೆತ್ತುಕೊಂಡಿದೆ. ಸಾವಿಗೆ ನಿಖರ ಕಾರಣ ತಿಳಿಯಲು ಕಮಿಟಿ ರಚಿಸಿ ವಿಚಾರಣೆ ಮಾಡಲಾಗುತ್ತಿದೆ. ಈ ಬಗ್ಗೆ ಎಸ್‌ಐಟಿ ರಚನೆಗೆ ಚಿಂತನೆ ನಡೆಸಲಾಗಿದೆ ಎಂದು ತಿಳಿಸಿದರು.
ಸರ್ಕಾರಿ ಆಸ್ಪತ್ರೆಗಳಲ್ಲಿನ ನಿರ್ಲಕ್ಷ್ಯದಿಂದ ಬಡವರು ಸರ್ಕಾರಿ ಆಸ್ಪತ್ರೆಗಳಿಗೆ ಬರಲು ಹಿಂದೇಟು ಹಾಕುತ್ತಿದ್ದಾರಾ ಎನ್ನುವ ಪ್ರಶ್ನೆಗೆ, ಹಾಗೇನಿಲ್ಲವಲ್ಲ ಎಂದ ಅವರು, ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಗಳ ಕೊರತೆ ಇದೆ ಮುಂದಿನ ದಿನಗಳಲ್ಲಿ ನೇಮಕಾತಿಗೆ ಆದೇಶ ಹೊರಡಿಸಲಾಗುವುದು ಎಂದರು.
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಿ ಮುಕ್ತಾಯಗೊಂಡಿದೆ. ಕನ್ನಡ ಸಾಹಿತ್ಯ…
ಮಂಡ್ಯ: ಜಿಲ್ಲೆಯ ಕ್ಯಾತನಹಳ್ಳಿಯಲ್ಲಿ ಬರ್ಬರ ಹತ್ಯೆ ಪ್ರಕರಣದ ಪಾತಕಿ ಮೊಹಮ್ಮದ್ ಇಬ್ರಾಹಿಂ ಪೊಲೀಸರ ವಿಚಾರಣೆ ವೇಳೆ ಶಾಕಿಂಗ್ ವಿಚಾರ ಬಾಯ್ಬಿಟ್ಟಿದ್ದಾನೆ.…
ಕುಶಾಲನಗರ: ಸ್ನಾನಕ್ಕೆಂದು ನದಿಗೆ ಇಳಿದಿದ್ದ ವ್ಯಕ್ತಿಯೊಬ್ಬರು ಜಲ ಸಮಾಧಿಯಾಗಿರುವ ಘಟನೆ ಕುಶಾಲನಗರದಲ್ಲಿ ನಡೆದಿದೆ. ಕುಶಾಲನಗರ ಅಯ್ಯಪ್ಪ ಸ್ವಾಮಿ ದೇವಾಲಯ ಸಮೀಪದಲ್ಲಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರಸಿದ್ಧ ಪಾರ್ಕ್ ಆದ ಕಬ್ಬನ್ ಪಾರ್ಕ್‌ನಲ್ಲಿ ಇನ್ನು ಮುಂದೆ ಯಾವುದೇ ಸಂಘಟನೆಗಳು ತಮ್ಮ ಚಟುವಟಿಕೆ…
13 ವರ್ಷದ ವೈಭವ್ ಸೂರ್ಯವಂಶಿ ಐಪಿಎಲ್ ಹರಾಜಿನಲ್ಲಿ 1.10 ಕೋಟಿಗೆ ರಾಜಸ್ಥಾನ ತಂಡಕ್ಕೆ ಹರಾಜಾಗುವ ಮೂಲಕ ಕಿರಿಯ ವಯಸ್ಸಿಗೆ ಐಪಿಎಲ್‌ಗೆ…
ಕುವೈತ್: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್ ಮಿಶಾಲ್…