Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಮುಂದುವರಿದ ಬಾಣಂತಿಯರ ಸಾವು | ಕಲಬುರಗಿಯಲ್ಲಿ ಮತ್ತೊಬ್ಬ ಬಾಣಂತಿ ಬಲಿ

ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಭಾಗ್ಯಶ್ರೀ ಅವರನ್ನು ಸೋಮವಾರ ಅಫಜಲಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಾಲಿಸಲಾಯಿತು. ಮಂಗಳವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದರು. ಆ ನಂತರ
ರಕ್ತದೊತ್ತಡ (blood pressure) ಕಡಿಮೆಯಾಯಿತು. ತಕ್ಷಣವೇ ಜಿಲ್ಲಾಸ್ಪತ್ರೆಗೆ ಸೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.

ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ಬಾಣಂತಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.

Tags: