ಕಲಬುರಗಿ: ರಾಜ್ಯದಲ್ಲಿ ಬಾಣಂತಿಯರ ಸಾವು ಪ್ರಕರಣ ಮುಂದುವರೆದಿದ್ದು, ಅಫಜಲಪುರ ತಾಲೂಕಿನ ಬಾಣಂತಿಯೊಬ್ಬರು ಕಲಬುರಗಿಯ ಜಿಲ್ಲಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಅಫಜಲಪುರ ತಾಲೂಕಿನ ಹವಳಗಾ ಭಾಗ್ಯಶ್ರೀ ಶಿವಾಜಿ (22) ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾಳೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿ ಭಾಗ್ಯಶ್ರೀ ಅವರನ್ನು ಸೋಮವಾರ ಅಫಜಲಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಾಲಿಸಲಾಯಿತು. ಮಂಗಳವಾರ ಬೆಳಿಗ್ಗೆ ಗಂಡು ಮಗುವಿಗೆ ಜನ್ಮ ನೀಡಿದರು. ಆ ನಂತರ
ರಕ್ತದೊತ್ತಡ (blood pressure) ಕಡಿಮೆಯಾಯಿತು. ತಕ್ಷಣವೇ ಜಿಲ್ಲಾಸ್ಪತ್ರೆಗೆ ಸೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಗದೆ ಬಾಣಂತಿ ಸಾವನ್ನಪ್ಪಿದ್ದಾರೆ. ಇದಕ್ಕೆ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು ಬಾಣಂತಿ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಆರೋಪಿಸಿದ್ದಾರೆ.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…