ರಾಯಚೂರು: ಇಲ್ಲಿ ಪಕ್ಷಿಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಹಕ್ಕಿಜ್ವರದ ಆತಂಕ ಮನೆಮಾಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನಲ್ಲಿ ಪ್ರತೀ ದಿನ ಪಾರಿವಾಳ, ಕೊಕ್ಕರೆ, ಕಾಗೆ, ಕಿಂಗ್ ಫಿಶರ್, ಸುವರ್ಣಪಕ್ಷಿ ಸೇರಿದಂತೆ ವಿವಿಧ ಜಾತಿಯ ಪಕ್ಷಿಗಳು ಸಾವನ್ನಪ್ಪುತ್ತಿವೆ.
ಕಳೆದ ಐದಾರು ದಿನಗಳಿಂದಲೂ ಮಾನ್ವಿ ಪಟ್ಟಣ, ರಬಣಕಲ್ ಸೇರಿದಂತೆ ಹಲವೆಡೆ ಪಕ್ಷಗಳು ಇದ್ದಕ್ಕಿದ್ದಂತೆ ಮರದ ಮೇಲಿಂದ ಬಿದ್ದು, ಸಾವನ್ನಪ್ಪುತ್ತಿವೆ. ಈ ಹಿನ್ನೆಲೆಯಲ್ಲಿ ಸ್ಥಳೀಯರದಲ್ಲಿ ಆತಂಕ ಮನೆಮಾಡಿದ್ದು, ಇದು ಹಕ್ಕಿ ಜ್ವರ ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪಶುವೈದ್ಯಾಧಿಕಾರಿಗಳು ಮರದಿಂದ ಬಿದ್ದ ಪಕ್ಷಿಗಳಿಗೆ ಇಂಜೆಕ್ಷನ್ ನೀಡಿ ರಕ್ಷಣೆ ಮಾಡಿದ್ದಾರೆ. ಮೃತ ಪಕ್ಷಿಯ ಕಳೆಬರವನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.
ಒಂದು ವೇಳೆ ವರದಿಯಲ್ಲಿ ಹಕ್ಕಿ ಜ್ವರ ಎಂದು ದೃಢವಾದರೆ, ಕೋಳಿ ಸಾಕಾಣಿಕೆ ಮೇಲೆ ಭಾರೀ ಹೊಡೆತ ಬೀಳಲಿದ್ದು, ಕೋಳಿ ಸಾಕಾಣಿಕೆ ಮಾಡುತ್ತಿರುವ ಮಾಲೀಕರಿಗೆ ಢವ ಢವ ಶುರುವಾಗಿದೆ ಎನ್ನಲಾಗುತ್ತಿದೆ.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…