ಬೆಂಗಳೂರು: ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ, ಕರ್ನಾಟಕ ಮೂಲದ ಡೇವಿಡ್ ಜಾನ್ಸ್‌ನ್ ಇಂದು(ಜೂ.20) ಕೊನೆಯುಸಿರೆಳೆದಿದ್ದಾರೆ. 52 ವರ್ಷದ ಡೇವಿಡ್ ಜಾನ್ಸ್‌ನ್ ಕಟ್ಟಡದಿಂದ ಜಾರಿ ಬಿದ್ದು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.
ನಗರದ ಕೊತ್ತನೂರ ಠಾಣಾ ವ್ಯಾಪ್ತಿಯಲ್ಲಿರುವ ಕನಕಶ್ರೀ ಲೇಔಟ್‌ನಲ್ಲಿರುವ ಎಸ್‌ಎಲ್‌ವಿ ಪ್ಯಾರಡೈಸ್‌ನಲ್ಲಿ ಈ ಘಟನೆ ಸಂಭವಿಸಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ, ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಇವರು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದ್ದು, ಸದ್ಯ ಈ ಬಗ್ಗೆ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.
ಡೇವಿಡ್ ಜಾನ್ಸ್‌ನ್ ನಿಧನಕ್ಕೆ ಕ್ರಿಕೆಟ್ ವಲಯದ ಆಟಗಾರರು ಹಾಗೂ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.
ಮಂಡ್ಯ: ಪಾರ್ಸೆಲ್ ಕೊಡುವ ನೆಪದಲ್ಲಿ ಬಂದು ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಡ್ಯದ ಕ್ಯಾತನಹಳ್ಳಿ ಗ್ರಾಮದಲ್ಲಿ ನಡೆದಿದೆ. ರಮೇಶ್…
ಬೆಂಗಳೂರು: ನಿವೃತ್ತ ಸಾರಿಗೆ ನೌಕರರಿಗೆ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದ್ದು, ಗ್ರಾಚ್ಯುಟಿ ಹಣವನ್ನು ಬಿಡುಗಡೆ ಮಾಡಿದೆ. ಗ್ರಾಚ್ಯುಟಿ ಮತ್ತು ಗಳಿಕೆ…
ಬೆಂಗಳೂರು: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ವೇದಿಕೆಯನ್ನು ಸಿಎಂ ಸಿದ್ದರಾಮಯ್ಯ ದುರುಪಯೋಗಪಡಿಸಿಕೊಂಡಿದ್ದಾರೆ…
ಹೈದರಾಬಾದ್: ಡಿಸೆಂಬರ್.4ರಂದು ಸಂಧ್ಯಾ ಥಿಯೇಟರ್ ಬಳಿ ನಡೆದ ಕಾಲ್ತುಳಿತದಲ್ಲಿ ಮಹಿಳೆಯೋರ್ವರು ಮೃತಪಟ್ಟಿದ್ದು ದುರದೃಷ್ಟಕರ ಎಂದು ನಟ ಅಲ್ಲು ಅರ್ಜುನ್ ಬೇಸರ…
ಬೆಂಗಳೂರು: ಎರಡು ಕಾರು, ಎರಡು ಲಾರಿ ಹಾಗೂ ಶಾಲಾ ಬಸ್ ನಡುವಿನ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ…
ಬೆಂಗಳೂರು: ವಕ್ಫ್ ಮಂಡಳಿಯು ಹಿಂದೂ ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ…