Mysore
27
scattered clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಕೃಷ್ಣಮೃಗಗಳ ಸಾವಿನ ಸಂಖ್ಯೆ 31ಕ್ಕೆ ಏರಿಕೆ: ಪ್ರಾಣಿಪ್ರಿಯರಿಗೆ ಆತಂಕ

ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಬ್ಯಾಕ್ಟೀರಿಯಾದಿಂದ ಮೃತಪಟ್ಟ ಕೃಷ್ಣಮೃಗಗಳ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಕಳೆದ ಕೆಲ ದಿನಗಳಿಂದ ಕೃಷ್ಣಮೃಗಗಳ ಸಾವಿನ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಪ್ರಾಣಿಪ್ರಿಯರಿಗೆ ಆತಂಕ ಸೃಷ್ಟಿ ಮಾಡಿದೆ.

ಇದನ್ನು ಓದಿ: ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲಯದಲ್ಲಿ ಮತ್ತೊಂದು ಕೃಷ್ಣಮೃಗ ಸಾವು

ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು ಸಂಭವಿಸಿದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ವೈದ್ಯರು ಉಳಿದಿರುವ 7 ಕೃಷ್ಣಮೃಗಗಳಿಗೆ ಆಂಟಿ ಬಯೋಟಿಕ್‌ ಚಿಕಿತ್ಸೆ ನೀಡಿ ತೀವ್ರ ನಿಗಾ ಇಟ್ಟಿದ್ದಾರೆ.

ಇನ್ನು ಕೃಷ್ಣಮೃಗಗಳ ಸಾವಿಗೆ ಗಳಲೆ ರೋಗ ಕಾರಣ ಎಂಬ ಶಂಕೆ ವ್ಯಕ್ತವಾಗಿದ್ದು, ಸಿಬ್ಬಂದಿಗಳು ಮೃಗಾಲಯದ ಒಳಗಡೆ ಔಷಧಿ ಸಿಂಪಡಣೆ ಮಾಡಿ ಬ್ಯಾಕ್ಟೀರಿಯಾ ನಾಶ ಮಾಡುವ ಪ್ರಯತ್ನ ಮಾಡಿದ್ದಾರೆ.

ಗಳಲೆ ರೋಗ ಇತರೆ ಸಾಕು ಪ್ರಾಣಿಗಳಿಗೂ ಹರಡುವ ಭೀತಿ ಇರುವುದರಿಂದ ಸುತ್ತಮುತ್ತಲಿನ ಗ್ರಾಮಗಳಿಗೂ ಎಚ್ಚರಿಕೆಯ ಸಂದೇಶವನ್ನು ಕಳುಹಿಸಲಾಗಿದೆ.

Tags:
error: Content is protected !!