ಬೆಂಗಳೂರು: ಈಗ ಮುಖ್ಯಮಂತ್ರಿ ಯಾರಾಗಬೇಕೆಂದು ಕಾಂಗ್ರೆಸ್ ಪಕ್ಷದೊಳಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ರಾಜೀನಾಮೆ ನೀಡದಿದ್ದರೆ ಪಕ್ಷದಲ್ಲಿ ಅನೇಕರು ದಂಗೆ ಏಳಲಿದ್ದಾರೆ. ಹೀಗಾಗಿ ಅವರು ರಾಜೀನಾಮೆ ನೀಡುವುದು ಸೂಕ್ತ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ವಿಧಾನಸೌಧದ ಗಾಂಧಿ ಪ್ರತಿಮೆ ಮುಂಭಾಗ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಹೈಕೋರ್ಟ್‌ನಿಂದ ತೀರ್ಪು ಬಂದ ನಂತರವೂ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿಲ್ಲ. ಬಿ.ಎಸ್.ಯಡಿಯೂರಪ್ಪನವರ ಮೇಲೆ ಆರೋಪ ಬಂದಾಗ ಇವರೇ ರಾಜೀನಾಮೆಗೆ ಒತ್ತಾಯಿಸಿದ್ದರು. ತನಿಖೆಗೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದೂ ಹೇಳಿದ್ದರು. ಹಾಗೆಯೇ ಈಗ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಿದೆ. ಕೆ.ಎಸ್.ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗಲೂ ಇದೇ ರೀತಿ ವಿಧಾನಸಭೆಯಲ್ಲಿ ಪ್ರತಿಭಟಿಸಿದ್ದರು. ಸಚಿವರಾಗಿದ್ದ ಬಿ.ನಾಗೇಂದ್ರ ಮೇಲೆ ಆರೋಪ ಬಂದು ಅವರು ರಾಜೀನಾಮೆ ನೀಡಿದ್ದಾರೆ. ಆದರೆ ಸಿಎಂ ಮಾತ್ರ ರಾಜೀನಾಮೆ ನೀಡುತ್ತಿಲ್ಲ ಎಂದರು.
ವಾಲ್ಮೀಕಿ ನಿಗಮದ ಪರಿಶಿಷ್ಟ ಪಂಗಡದವರ ಹಣ ದುರ್ಬಳಕೆಯಾಗಿದೆ ಎಂದು ಸರ್ಕಾರ ಒಪ್ಪಿಕೊಂಡಿದೆ. ಅಭಿವೃದ್ಧಿಗೆ ಕಾಸಿಲ್ಲ, ಆದರೆ ಲೂಟಿಗೆ ಮಾತ್ರ ಹಣ ದೊರೆಯುತ್ತಿದೆ. ಸಂತೋಷ್ ಹೆಗ್ಡೆಯವರು ಈ ಹಿಂದೆ ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಈಗ ಸಿದ್ದರಾಮಯ್ಯನವರ ರಾಜೀನಾಮೆ ಕೇಳಿದ್ದಾರೆ. ಹಿರಿಯ ರಾಜಕಾರಣಿ ಕೆ.ಬಿ.ಕೋಳಿವಾಡ ಕೂಡ ರಾಜೀನಾಮೆ ನೀಡುವುದು ಸೂಕ್ತ ಎಂದಿದ್ದಾರೆ. ಈ ಎಲ್ಲರ ಅಭಿಪ್ರಾಯಕ್ಕೆ ಮನ್ನಣೆ ಕೊಡಿ ಎಂದು ಆಗ್ರಹಿಸಿದರು.
ಕಾಂಗ್ರೆಸ್‌ನಲ್ಲಿ ಸಿಎಂ ಆಗಲು ಅನೇಕರು ಕಾಯುತ್ತಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ನೀಡದಿದ್ದರೆ ಅವರೆಲ್ಲರೂ ದಂಗೆ ಏಳಲಿದ್ದಾರೆ. ಸಂಸತ್ತಿನಲ್ಲಿ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸಂವಿಧಾನದ ಪುಸ್ತಕ ಹಿಡಿದು ಓಡಾಡಿದ್ದಾರೆ. ಅವರೆಲ್ಲರೂ ಈಗ ಮೌನಕ್ಕೆ ಜಾರಿದ್ದಾರೆ. ದೇಶವನ್ನು 50 ವರ್ಷಗಳ ಕಾಲ ಕಾಂಗ್ರೆಸ್ ಲೂಟಿ ಮಾಡಿದೆ. ಕ್ಲೀನ್ ಎಂದು ಹೇಳಿಕೊಳ್ಳುವ ಸಿದ್ದರಾಮಯ್ಯ ರಾಜೀನಾಮೆ ಕೊಟ್ಟು ಕ್ಲೀನ್ ಆಗಲಿ ಎಂದರು.
ಬೇರೆ ದಾರಿ ಇಲ್ಲ
ಸ್ವಜನಪಕ್ಷಪಾತ ಆಗಿರುವುದು ನಿಜ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇನ್ನು ಯಾವುದೇ ಕೋರ್ಟ್‌ಗೆ ಹೋದರೂ ಅದೇ ವಾದವನ್ನು ಮಂಡಿಸಬೇಕಿದೆ. ಹೀಗಾಗಿ ರಾಜೀನಾಮೆ ಬಿಟ್ಟು ಬೇರೆ ದಾರಿ ಇಲ್ಲ. ರಾಜ್ಯದ ಜನರು ನನ್ನ ಜೊತೆಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದು, ಅದನ್ನು ಮೊದಲು ಸಾಬೀತಪಡಿಸಲಿ. ಚುನಾವಣೆ ನಡೆಸಿ ಎಷ್ಟು ಬೆಂಬಲ ಇದೆ ಎಂದು ತೋರಿಸಲಿ. ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆ ಎದುರಿಸಲಿ ಎಂದು ಸವಾಲೆಸೆದರು.
ಇದು ರಾಜಕೀಯ ಪ್ರೇರಿತವಾಗಿದ್ದರೆ ಕೋರ್ಟ್‌ಗಳು ಏಕೆ ತೀರ್ಪು ನೀಡುತ್ತಿದ್ದವು? ಈ ರೀತಿ ಕಾಂಗ್ರೆಸ್ ಆರೋಪ ಮಾಡುವುದು ಒಂದು ರೀತಿ ದೊಂಬರಾಟವಾಗಿದೆ. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಮೊದಲಿಂದಲೂ ಸಮಸ್ಯೆ ಇದೆ. ಅನೇಕ ಬಾರಿ ಭಿನ್ನಮತ ಉಂಟಾಗಿದೆ. ಯಾರು ಸಿಎಂ ಆಗಬೇಕೆಂಬ ಚರ್ಚೆ ಕೂಡ ಕಾಂಗ್ರೆಸ್‌ನೊಳಗೆ ನಡೆಯುತ್ತಿದೆ. ಈ ಸಮಯದಲ್ಲಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದು ಸೂಕ್ತ ಎಂದರು.
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…
ಟೆಹ್ರಾನ್ : ಮಧ್ಯಪ್ರಾಚ್ಯದಲ್ಲಿ ಕಳೆದ ಒಂದು ತಿಂಗಳಿಗೂ ಹೆಚ್ಚು ಕಾಲ ನಡೆಯುತ್ತಿರುವ ಇರಾನ್-ಅಮೇರಿಕಾ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಇಂದು ನಡೆಯಬೇಕಿದ್ದ…
ಶಿವಮೊಗ್ಗ : ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ಘಾಟ್ (ಬಾಳೇಬರೆ) ಪ್ರದೇಶದಲ್ಲಿ ರಸ್ತೆ ತಡೆಗೋಡೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವಾಗ ಗುಡ್ಡ…
ಹನೂರು : ಕೂಲಿ ಕೆಲಸಕ್ಕೆ ತೆರಳಿ ವಾಪಸ್ ಗ್ರಾಮಕ್ಕೆ ನೀರಿನಲ್ಲಿ ಈಜಿಕೊಂಡು ಬರುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ವ್ಯಕ್ತಿಯೋರ್ವ…