ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿ ವಿಚಾರದಲ್ಲಿ ಜನರಿಗೆ ಕಿರುಕುಳ ನೀಡುವುದು ಕಂಡುಬಂದರೆ ಕ್ರಿಮಿನಲ್ ದೂರು ದಾಖಲಿಸಿ ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ವಿಕಾಸಸೌಧದಲ್ಲಿ ಸೋಮವಾರ ಜಿಲ್ಲಾಧಿಕಾರಿಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪೆನಿಗಳು 59 ಸಾವಿರ ಕೋಟಿ ರೂ. ಸಾಲ ನೀಡಿವೆ. ಅಲ್ಲದೆ, ತಮ್ಮ ಸಾಮರ್ಥ್ಯ ವಿಸ್ತರಿಸಿಕೊಳ್ಳುವ ಸಲುವಾಗಿ ಆರ್ಬಿಐ ಗೈಡ್ಲೈನ್ಸ್ ಉಲ್ಲಂಘಿಸಿ ಸಾಲ ನೀಡುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.
ಓರ್ವ ವ್ಯಕ್ತಿಗೆ 2ಲಕ್ಷಕ್ಕಿಂತ ಹೆಚ್ಚು ಸಾಲ ನೀಡಬಾರದು ಎಂದು ಆರ್‌ಬಿಐ ನಿಯಮವಿದೆ. ಇದನ್ನು ಯಾರೂ ಅನುಸರಿಸುತ್ತಿಲ್ಲ. ಓರ್ವ ವ್ಯಕ್ತಿಗೆ 5-6 ಲಕ್ಷ ರೂ. ಸಾಲ ನೀಡಲಾಗುತ್ತಿದೆ. ಈ ಮೂಲಕ ಬಡವರನ್ನು ಸಾಲದ ಸುಳಿಗೆ ಸಿಲುಕಿಸಲಾಗುತ್ತಿದೆ. ಹೀಗಾಗಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿಗಳು ಈ ವಾರದೊಳಗೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮುಖ್ಯಸ್ಥರ ಜೊತೆಗೆ ಸಭೆ ನಡೆಸಿ ಸಾಲ ವಸೂಲಾತಿಗೆ ಆರ್‌ಬಿಐ ನಿಗದಿಪಡಿಸಿರುವ ಮಾದರಿ ಕಾರ್ಯಾಚರಣೆಯನ್ನು ಪಾಲನೆ ಮಾಡಲು ಹಾಗೂ ಬೇಜಾಬ್ದಾರಿಯಿಂದ ಸಾಲ ನೀಡುವುದನ್ನೂ ತಡೆಯಲು ಸೂಚಿಸಲಾಗಿದೆ ಎಂದರು.
ಮೈಕ್ರೋ ಫೈನಾನ್ಸ್ ಕಂಪೆನಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಕೇಂದ್ರ ಸರ್ಕಾರ ಯಾವುದೇ ವಿಶೇಷ ಅಧಿಕಾರ ನೀಡಿಲ್ಲ. ಆದರೆ, ರಾಜ್ಯ ಸರ್ಕಾರವೇ ತನ್ನ ಅಧಿಕಾರದ ಮಿತಿಯಲ್ಲಿ ಬೇರೆ ಬೇರೆ ಕಾನೂನುಗಳ ಮೂಲಕ ಮೈಕ್ರೋ ಫೈನಾನ್ಸ್‌ಗಳ ಅಕ್ರಮಗಳಿಗೆ ಕಡಿವಾಣ ಹಾಕಲಿದೆ ಎಂದು ಹೇಳಿದರು.
ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…
ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.15) ಸಂಜೆ ಅಕಾಲಿಕವಾಗಿ ಮಳೆ ಸುರಿದು…
ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…
ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…
ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…
ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…