ಬೆಂಗಳೂರು : ರಾಜ್ಯದಲ್ಲಿ ಇದೀಗ ಮತ್ತೊಮ್ಮೆ ಜಾತಿ ಜನಗಣತಿ ನಡೆಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
ಈ ಬಗ್ಗೆ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಇದನ್ನೂ ಓದಿ:- ಜಾತಿ ಜನಗಣತಿ ಮರುಸರ್ವೆ ಆಗಲ್ಲ ; ತಿದ್ದುಪಡಿ ಅಷ್ಟೆ : ಸಚಿವ ಸತೀಸ್ ಜಾರಕಿಹೊಳಿ
ಕಾಂತರಾಜು ಅವರ ಆಯೋಗ ವರದಿ ಸಲ್ಲಿಸಿ 10 ವರ್ಷ ಕಳೆದಿದೆ. ಹಿಂದುಳಿದ ವರ್ಗಗಳ ಆಯೋಗದ ಕಾಯ್ದೆ ಸೆಕ್ಷನ್ 11ರ ಪ್ರಕಾರ 10 ವರ್ಷ ಆದ ಬಳಿಕ ಹೊಸ ಸಮೀಕ್ಷೆ ನಡೆಸಬೇಕು ಎಂದು ಹೇಳಿದೆ. ಅಲ್ಲದೆ, ಹೈಕಮಾಂಡ್ ಕೂಡಾ ಸಲಹೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.





