ರಾಜ್ಯ

ಸಚಿವ ಸಂಪುಟ ಸಭೆಯಲ್ಲಿ ಜಾತಿ ಜನಗಣತಿ ಬಗ್ಗೆ ಚರ್ಚಿಸಿ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಹಿಂದುಳಿದ ವರ್ಗಗಳ ಜಾತಿ ಜನಗಣತಿ ವರದಿಯ ಕುರಿತು ಇದೇ 17ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಲ್ಲಿಯವರೆಗೂ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ಜಾತಿ ಜನಗಣತಿ ವರದಿಯನ್ನು ರಾಜ್ಯ ಸರ್ಕಾರ ಮಂಡಿಸಿದೆ ಎಂದು ಬಿಜೆಪಿ ಮಾಡಿರುವ ಆರೋಪಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, 17ರಂದು ಸಚಿವ ಸಂಪುಟ ಸಭೆಯಲ್ಲಿ ವರದಿಯ ಕುರಿತು ಚರ್ಚಿಸುವ ಒಂದು ವಿಷಯ ಮಾತ್ರ ಇದೆ. ಆ ಸಭೆಯ ಬಳಿಕ ನಾನು ಮಾತನಾಡುತ್ತೇನೆ. ಅದಕ್ಕೂ ಮುನ್ನ ಯಾವುದೇ ಹೇಳಿಕೆಗಳನ್ನು ನೀಡುವುದಿಲ್ಲ ಎಂದರು.

ಜಾತಿ ಜನಗಣತಿಯ ವರದಿ ರಾಜ್ಯದಲ್ಲಿ ಕಿಚ್ಚು ಹಚ್ಚಿದ್ದು, ಪರ-ವಿರೋಧದ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ಒಳವಲಯದಲ್ಲೇ ಬಹಳಷ್ಟು ಮಂದಿ ಜಾತಿವಾರು ಜನಸಂಖ್ಯೆ ಲೆಕ್ಕಾಚಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಕೆಲ ಸಚಿವರು ವರದಿ ತಮ್ಮ ಕೈ ಸೇರಿದೆ. ಅದನ್ನು ಅಧ್ಯಯನ ಮಾಡಿದ ಬಳಿಕ ಪ್ರತಿಕ್ರಿಯಿಸುತ್ತೇವೆ ಎಂದು ಜಾರಿಕೊಳ್ಳುತ್ತಿದ್ದಾರೆ.

ಹೀಗಿರುವಾಗ ಕಾಂಗ್ರೆಸ್ ನಾಯಕರು ಮಾತ್ರ ತಮ್ಮದೇ ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಪರದಾಡುತ್ತಿದ್ದಾರೆ. ಮುಖ್ಯಮಂತ್ರಿಯವರೇ ಹೇಳಿಕೆ ನೀಡಲು ಇಂದು ಹಿಂದೇಟು ಹಾಕಿದ್ದಾರೆ.

AddThis Website Tools
ಆಂದೋಲನ ಡೆಸ್ಕ್

Recent Posts

ಕಬಿನಿ ಹಾಗೂ ಕೆಆರ್‌ಎಸ್‌ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಗೊತ್ತಾ.?

ಮೈಸೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಮಳೆರಾಯ ಅಬ್ಬರಿಸಿ, ಬೊಬ್ಬಿರಿದಿದ್ದು, ಅನ್ನದಾತರ ಮೊಗದಲ್ಲಿ ಮಂದಹಾಸ ತರಿಸಿದ್ದಾನೆ. ಆದರೆ ರಾಜ್ಯದ ಪ್ರಮುಖ…

16 mins ago

ಜಾತಿಗಣತಿ ವಿಚಾರದಲ್ಲಿ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದಾರೆ: ಬಿ.ವೈ.ವಿಜಯೇಂದ್ರ

ದಾವಣಗೆರೆ: ಜಾತಿಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳುತ್ತಿದ್ದು, ಅವರಿಗೆ ಜಾತಿ ಗಣತಿ ವಿಚಾರದಲ್ಲಿ ಪ್ರಾಮಾಣಿಕತೆ ಇಲ್ಲ ಎಂದು ರಾಜ್ಯ…

28 mins ago

ಪಂಚ ಭೂತಗಳಲ್ಲಿ ಲೀನರಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌

ಬೆಂಗಳೂರು: ಪತ್ನಿಯಿಂದಲೇ ಕೊಲೆಯಾದ ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್‌ ಅವರ ಪಾರ್ಥಿವ ಶರೀರದ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು.…

57 mins ago

ಜಾತಿ ಗಣತಿಯಲ್ಲಿ ಮೂಲ ಪ್ರತಿಗಳು ಲಭ್ಯವಿಲ್ಲ: ಆರ್.‌ಅಶೋಕ್‌ ಹೇಳಿಕೆಗೆ ಡಿ.ಕೆ.ಶಿವಕುಮಾರ್‌ ತಿರುಗೇಟು

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು…

1 hour ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಐದು ದಿನಗಳ ಕಾಲ ಧಾರಾಕಾರ ಮಳೆಯಾಗುವ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮ ಕರ್ನಾಟಕ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ…

2 hours ago

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ನಟ ಯಶ್‍ ಪೂಜೆ

ಯಶ್‍ ಅವರು ರಾಮಾಯಣ ಚಿತ್ರದಲ್ಲಿ ನಟಿಸುತ್ತಿರುವ ವಿಷಯ ಗೊತ್ತೇ ಇದೆ. ಈ ಚಿತ್ರದ ಮೊದಲ ಭಾಗ 2026ರ ದೀಪಾವಳಿಗೆ ಪ್ರಾರಂಭವಾಗಲಿದೆ.…

2 hours ago