ರಾಜ್ಯ

ಅನರ್ಹ ಬಿಪಿಎಲ್ ಕಾರ್ಡ್‍ದಾರರಿಗೆ ಎಪಿಎಲ್ ನೀಡಲು ನಿರ್ಧಾರ: ಸಚಿವ ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ 13 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್‍ದಾರರಿದ್ದು, ಅವುಗಳನ್ನು ಪರಿಷ್ಕರಣೆ ಮಾಡಲಾಗುವುದು ಜೊತೆಗೆ ಅರ್ಹರಿಗೆ ಬಿಪಿಎಲ್ ಕಾರ್ಡ್ ನೀಡಲು ಮುಂದಿನ ತಿಂಗಳಿನಿಂದ ವೆಬ್‍ಸೈಟ್ ಮುಕ್ತವಾಗಿಡುವುದಾಗಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು, ವೈದ್ಯಕೀಯ ಚಿಕಿತ್ಸೆಯ ತುರ್ತು ಸಂದರ್ಭಕ್ಕೆ ಅನುಕೂಲವಾಗಲು ಪಡಿತರ ಕಾರ್ಡ್ ನೀಡುವ ಸಲುವಾಗಿ ಪ್ರತ್ಯೇಕ ಪೋರ್ಟಲ್ ಆರಂಭಿಸಲಾಗುತ್ತಿದೆ. ಇನ್ನು ಮುಂದೆ 24 ಗಂಟೆಯೊಳಗಾಗಿ ವೈದ್ಯಕೀಯ ಚಿಕಿತ್ಸೆಗೆ ಪಡಿತರ ಕಾರ್ಡ್‍ಗಳನ್ನು ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 25 ಲಕ್ಷ ಎಪಿಎಲ್‌ ಕಾರ್ಡ್‍ದಾರರಿದ್ದು, 1‌ ಲಕ್ಷ ಮಂದಿ ಅಕ್ಕಿ ತೆಗೆದುಕೊಳ್ಳುತ್ತಿರಲಿಲ್ಲ. ಅದಕ್ಕಾಗಿ ಎಪಿಎಲ್ ಕಾರ್ಡ್‍ಗೆ ಅಕ್ಕಿ ನೀಡುವುದನ್ನು ನಿಲ್ಲಿಸಲಾಗಿದೆ ಎಂದರು.

ಬಿಪಿಎಲ್ ಕಾರ್ಡ್‍ಗಳನ್ನು ರದ್ದು ಮಾಡುವುದಿಲ್ಲ. ಬದಲಾಗಿ ಅನರ್ಹರನ್ನು ಎಪಿಎಲ್ ವ್ಯಾಪ್ತಿಗೆ ತರುತ್ತೇವೆ. ಒಂದು ವೇಳೆ ಅರ್ಹರ ಕಾರ್ಡ್‍ಗಳು ರದ್ದುಗೊಂಡಿದ್ದರೆ ತಹಶೀಲ್ದಾರ್ ಅವರಿಗೆ ಮೇಲ್ಮನವಿ ಸಲ್ಲಿಸಬಹುದು. ತಕ್ಷಣವೇ ಅವರಿಗೆ ಬಿಪಿಎಲ್ ಕಾರ್ಡ್ ನೀಡುವುದಾಗಿ ಭರವಸೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

59 seconds ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

4 mins ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

8 mins ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

17 mins ago

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago