ರಾಜ್ಯ

ಸಂಪೂರ್ಣ ಮನೆ ಹಾನಿಗೆ 1.2 ಲಕ್ಷ ರೂ ಪರಿಹಾರ ಹಾಗೂ ಮನೆ ಒದಗಿಸಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

ಅವರು ಇಂದು(ಆ.5) ಪ್ರವಾಹ ಪೀಡಿತ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯು ಪರಿಹಾರ ವಿತರಣೆಯಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರ ವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ಮಾಡಲಾಗುವುದು ಎಂದು ತಿಳಿಸಿದರು.

ಪರಿಹಾರ ಕೆಲಸ ಪ್ರಾರಂಭ

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ.

ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳ ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಬೆಳಗಾವಿಯಲ್ಲಿ ಕಳೆದ 42 ದಿನದಿಂದ ನಿರಂತರ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಂಗನವಾಡಿಗಳಿಗೂ ರಜೆ ಘೋಷಣೆ ಮಾಡುವಂತೆ ಸೂಚಿಸಲಾಗಿದೆ ಎಂದರು.

ಮುಂದಿನ ವಾರ ಹೆಚ್ಚು ಮಳೆ: ಕಟ್ಟೆಚ್ಚರ ವಹಿಸಲು ಸೂಚನೆ
ಮುಂದಿನ ವಾರ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಇದಕ್ಕಾಗಿ ಕಂದಾಯ, ವಿಪತ್ತು ನಿರ್ವಹಣೆ, ಅರಣ್ಯ ಇಲಾಖೆ, ಇಂಧನ, ನೀರಾವರಿ ಸೇರಿದಂತೆ ಎಲ್ಲ ಇಲಾಖೆಗಳು ಎಚ್ಚರಿಕೆ ವಹಿಸುವಂತೆ ತಿಳಿಸಲಾಗಿದೆ ಎಂದರು.

ಗೃಹಲಕ್ಷ್ಮಿ
ಗೃಹ ಲಕ್ಷ್ಮಿ ಮೂರು ತಿಂಗಳಿನಿಂದ ಬಾಕಿ ಇದೆ ಎಂದು ಕೇಳಿದ್ದಕ್ಕೆ ಜುಲೈ ತಿಂಗಳಿನದ್ದು ಮಾತ್ರ ಬಾಕಿ ಇದೆ. ಅದನ್ನೂ ಶೀಘ್ರವೇ ವಿತರಿಸಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌, ಬೆಳಗಾವಿ ಜಿಲ್ಲೆಯ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಟ್ಯಾಂಕರ್ ಮೇಲೆ ದಾಳಿ

ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್‌ಬೋಟ್‌ಗಳಿಂದ…

46 mins ago

ಮತ್ತೆ ಹೊರ್ಮುಜ್‌ ಬಂದ್‌ ಮಾಡಿದ ಇರಾನ್‌

ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್‌ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್‌, ತನ್ನ ನಿರ್ಧಾರವನ್ನು…

1 hour ago

ಚಿರತೆಯಿಂದ ಅತ್ತೆ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ : ಸಚಿವೆ ಹೆಬ್ಬಾಳ್ಕರ್‌ ಭರವಸೆ

ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…

2 hours ago

ದಕ್ಷಿಣ ಆಫ್ರಿಕಾದಿಂದ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದ ನಾಲ್ಕು ಚೀತಾ

ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…

3 hours ago

ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧಿಸಲ್ಲ: ಗೃಹ ಸಚಿವ ಪರಮೇಶ್ವರ್

ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…

5 hours ago

ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ರಾಬರ್ಟ್‌ ವಾದ್ರಾ

ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್‌ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…

7 hours ago