ರಾಜ್ಯ

ಕೆಆರ್‌ಎಸ್‌ ಬೃಂದಾವನ ಮೇಲ್ದರ್ಜೆಗೇರಿಸಲು ತೀರ್ಮಾನ: ಸಚಿವ ಸಂಪುಟದಲ್ಲಿ ಕೈಗೊಂಡ ಇತರೆ ನಿರ್ಣಯಗಳು ಇಂತಿವೆ….

ಬೆಂಗಳೂರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್‌ಎಸ್‌ ಬೃಂದಾವನ ಉದ್ಯಾನವನ್ನು ಮೇಲ್ದೆರ್ಜೆಗೆರಿಸಲು ಶುಕ್ರವಾರ ನಡೆದ ಸಿಎಂ ಸಿದ್ದರಾಮಯ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಬೃಂದಾವನ ಉದ್ಯಾನವನ್ನು 2,633 ಕೋಟಿ ರೂ.ವೆಚ್ಚದಲ್ಲಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ದಿಗೆ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿದೆ ನೀಡಲಾಗಿದೆ.

ರಾಜ್ಯ ಸಚಿವ ಸಂಪುಟ ಬಳಿಕ ನಿರ್ಣಯ ಕುರಿತು ವಿವರಿಸಿದ ಕಾನೂನು, ನ್ಯಾಯ, ಮಾನವ ಹಕ್ಕುಗಳು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್.ಕೆ ಪಾಟೀಲ್‌, ಮಂಡ್ಯ ಜಿಲ್ಲೆಯ ಕೃಷ್ಣರಾಜಸಾಗರ ಜಲಾಶಯದ ಕೆಳಭಾಗದಲ್ಲಿನ 198 ಎಕರೆ ಜಾಗದಲ್ಲಿ ಉದ್ಯಾನವನ ಸೌಂದರ್ಯೀಕರಣ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಉದ್ದೇಶಿಸಲಾಗಿದ್ದು, ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೈಗೊಳ್ಳಲು ಈಗಾಗಲೇ ನೀಡಿರುವ ಅನುಮೋದನೆಯಂತೆ ಟೆಂಡರ್ ಕರೆಯುವ ಪ್ರಸ್ತಾವನೆಗೆ ಸಚಿವ ಸಂಪುಟ ಅನುಮೋದಿಸಿದೆ ಎಂದರು.

ಕೃಷ್ಣರಾಜಸಾಗರ ಆಣೆಕಟ್ಟೆಯ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆಗೆ ಉನ್ನತೀಕರಣಗೊಳಿಸುವ ಕಾಮಗಾರಿಗಳ ವಿಸ್ತೃತ ಯೋಜನಾ ವರದಿಯನ್ನು ಆರ್ಥಿಕ ಇಲಾಖೆ, ಯೋಜನಾ ಇಲಾಖೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಯು ನೀಡಿರುವ ಅಭಿಪ್ರಾಯದನ್ವಯ ಪರಿಷ್ಕರಿಸಿ ಟೆಂಡರ್ ಮುಖಾಂತರ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಚೌಕಟ್ಟಿನಲ್ಲಿ ಅನುಷ್ಠಾನಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ. ಒಟ್ಟು ಯೋಜನಾ ವೆಚ್ಚ ರೂ.2663.74 ಕೋಟಿ. 34.5 ವರ್ಷಗಳ ಒಟ್ಟು ರಿಯಾಯಿತಿ ಅವಧಿಯು 4.5 ವರ್ಷಗಳ ರಿಯಾಯಿತಿ ಅವಧಿಯು ಸೇರಿದೆ. ಮಾಸ್ಟರ್ ಪ್ಲಾನ್ನಲ್ಲಿ ಒಟ್ಟು 45 ಘಟಕಗಳನ್ನು ಪರಿಗಣಿಸಲಾಗಿದೆ ಎಂದು ಸಚಿವರು ವಿವರ ನೀಡಿದರು.

ಸಚಿವ ಸಂಪುಟದ ಇತರೆ ನಿರ್ಣಯ ಪ್ರಕಟಿಸಿದ ಸಚಿವರು….

ಪ್ರಸ್ತುತ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಜಿಲ್ಲೆಯೆಂದು ಮರನಾಮಕರಣ ಮಾಡುವ ಪ್ರಸ್ತಾವನೆಯನ್ನು ರಾಜ್ಯ ಸಚಿವ ಸಂಪುಟ ಅನುಮೋದಿಸಿದೆ ಎಂದರು.

ಬ್ರ್ಯಾಂಡ್ ಬೆಂಗಳೂರು ಮೂಲಕ ಸೇರ್ಪಡೆ (Inclusive Growth) ಅಭಿವೃದ್ಧಿಯ ಕಲ್ಪನೆಗಳನ್ನು ಸಾಕಾರಗೊಳಿಸುವ ಸದುದ್ದೇಶದಿಂದ ಈ ಹೊಸ ನಾಮಕರಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಸಚಿವರು ಹೇಳಿದರು.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಒಂದು ಬಾರಿಗೆ ವಯೋಮಿತಿಯ ನಿರ್ಬಂಧವನ್ನು ಸಡಿಲಿಸಿ ಹೆಚ್ಚುವರಿ ವಿಶೇಷ ಅವಕಾಶವನ್ನು ನೀಡುವ ಕುರಿತು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPAR) ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ದಿನಾಂಕ: 21.06.2024ರ ಸರ್ಕಾರಿ ಆದೇಶಕ್ಕೆ ಸಚಿವ ಸಂಪುಟ ಘಟನೋತ್ತರ ಅನುಮೋದನೆ ನೀಡಿದೆ. 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ ಎಲ್ಲಾ ಅಭ್ಯರ್ಥಿಗಳು ಇದು ಅನ್ವಯವಾಗುತ್ತದೆ ಎಂದು ತಿಳಿಸಿದರು.

ಮೆ|| ಲೋಕ ಶಿಕ್ಷಣ ಟ್ರಸ್ಟ್ ಧಾರವಾಡದ ಗಾಮನಗಟ್ಟಿ ಕೈಗಾರಿಕಾ ಪ್ರದೇಶದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಲು 2.64 ಎಕರೆ ಜಮೀನನ್ನು ಹಂಚಿಕೆ ಮಾಡಲು ಕೈಗಾರಿಕಾ ಇಲಾಖೆ ಪ್ರಸ್ತಾಪಿಸಿತ್ತು. ಪ್ರಸ್ತಾಪಕ್ಕೆ ಸಚಿವ ಸಂಪುಟ ಅನುಮೋದಿಸಿದೆ. ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಸಿ.ಎ ನಿವೇಶನ ಸಂಖ್ಯೆ: 1 ರಲ್ಲಿ 2.64 ಎಕರೆ ಜಮೀನನ್ನು ಪ್ರಸ್ತುತವಿರುವ ಹಂಚಿಕೆ ದರದ ಮೇಲೆ ಶೇ.75 ರಷ್ಟು ರಿಯಾಯಿತಿ ದರದಲ್ಲಿ ಹಂಚಿಕೆ ಮಾಡಲು ಹಾಗೂ ವಿಸ್ತರಿಸುವ ರಿಯಾಯಿತಿ ಮೊತ್ತವನ್ನು ಸರ್ಕಾರದಿಂದ ಕೆಐಎಡಿಬಿಗೆ ಮರುಪಾವತಿ ಮಾಡಲು ಸಚಿವ ಸಂಪುಟ ಅನುಮೋದಿಸಿದೆ ಎಂದು ಸಚಿವರು ವಿವರಿಸಿದರು.

ಬೆಂಗಳೂರು ಆಧಾರಿತ ಅನಿಮೇಶನ್ ಇಂಡಸ್ಟಿಗೆ ABAI (Association of Bangalore Animation Industry) ಸಂಘಟನೆಯು ಅನಿಮೇಶನ್, VFX (Visual Effects) ಮತ್ತು ಗೇಮಿಂಗ್ (AVGC) ಉದ್ಯಮವನ್ನು ಅಭಿವೃದ್ಧಿಪಡಿಸಲು ಬದ್ಧವಾಗಿದೆ. ಇದು ಉದ್ಯಮ, ಶೈಕ್ಷಣಿಕ ಸಂಸ್ಥೆಗಳು, ಸರ್ಕಾರ ಮತ್ತು AVGC (Animation, Visual Effects, Gaming and Comics) ಸಮುದಾಯದ ಪರಿಸರ ವ್ಯವಸ್ಥೆಯ ಅಭಿವೃದ್ಧಿಗೆ ಉತ್ತೇಜಕವಾಗಿ ಕಾರ್ಯನಿರ್ವಹಿಸುವ ಉದ್ದೇಶ ಹೊಂದಿದೆ. ಒಟ್ಟು ರೂ.16.00 ಕೋಟಿಗಳ ವೆಚ್ಚದಲ್ಲಿ ಈ ಉತ್ಕೃಷ್ಟತಾ ಕೇಂದ್ರವನ್ನು ಪ್ರಾರಂಭಿಸಲಾಗುವುದು ಎಂದು ಸಚಿವರು ತಿಳಿಸಿದರು.

2024-25ನೇ ಸಾಲಿನಲ್ಲಿ ಈಗ ಬಾಡಿಗೆ ಕಟ್ಟಡದಲ್ಲಿ ನಡೆಸಲಾಗುತ್ತಿರುವ 18 ವಿದ್ಯಾರ್ಥಿ ನಿಲಯಗಳಿಗೆ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡುವುದಾಗಿ ಮುಂಗಡ ಪತ್ರದ ಭಾಷಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಯವರು ಘೋಷಿಸಿದ್ದರು. ಈ ಪೈಕಿ ತಲಾ 100 ವಿದ್ಯಾರ್ಥಿಗಳಿಗೆ ಒಂದು ಹಾಸ್ಟೆಲ್ನಂತೆ ೧೫ ಹಾಸ್ಟೆಲ್ಗಳ ನಿರ್ಮಾಣವನ್ನು ಕೈಗೊಳ್ಳಲಾಗುವುದು. ಪ್ರತಿ ಹಾಸ್ಟೆಲ್ ವೆಚ್ಚ ರೂ.7.00 ಕೋಟಿಗಳು. ಒಟ್ಟು ಯೋಜನಾ ವೆಚ್ಚ ರೂ.105.00 ಕೋಟಿಗಳ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಅನುಮೋದಿಸಿದೆ.

ಪದವಿ ಪೂರ್ವ ಕಾಲೇಜು ಉಪನ್ಯಾಸಕರುಗಳ ಹುದ್ದೆಗೆ ಬಡ್ತಿ ಹೊಂದಲು ಪ್ರೌಢ ಶಾಲಾ ಶಿಕ್ಷಕರಿಗೆ ಸ್ನಾತಕೋತ್ತರ ಪದವಿಯಲ್ಲಿ ಶೇ.55 ರಷ್ಟು ಅಂಕಗಳನ್ನು ನಿಗದಿಪಡಿಸಿರುವುದನ್ನು ಪರಿಷ್ಕರಿಸಿ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಥವಾ ಕೇಂದ್ರಿಕೃತ ದಾಖಲಾತಿ ಘಟಕ ಅಥವಾ ಕರ್ನಾಟಕ ಲೋಕಸೇವಾ ಆಯೋಗಗಳನ್ನು ಉಪನ್ಯಾಸಕರ ವೃಂದದ ಆಯ್ಕೆ ಪ್ರಾಧಿಕಾರವೆಂದು ನಿಗದಿಪಡಿಸಲು ಮತ್ತು ಉಪನ್ಯಾಸಕ ವೃಂದದ ನೇರ ನೇಮಕಾತಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಮಾತ್ರ ಕನಿಷ್ಠ ಶೇ.50 ರಷ್ಟು ಅಂಕಗಳನ್ನು ನಿಗದಿಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಸ್ತಾವನೆಯನ್ನು ಸಚಿವ ಸಂಪುಟವು ಒಪ್ಪಿದೆ ಎಂದು ಸಚಿವರು ತಿಳಿಸಿದರು.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಕಂಪನಿ ಕಾಯ್ದೆ, 2013ರನ್ವಯ ಸ್ಥಾಪಿಸಲು ರಾಜ್ಯ ಸಚಿವ ಸಂಪುಟ ನರ್ಣಯಿಸಿದೆ. ಕೌಶಲ್ಯ ಮಿಷನ್ನ ಎಲ್ಲಾ ಅಲ್ಪಾವಧಿ ಕೌಶಲ್ಯಾಭಿವೃದ್ಧಿ ಚಟುವಟಿಕೆಗಳನ್ನು ಒಂದೆಡೆ ತರುವ ಉದ್ದೇಶದಿಂದ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಸ್ಥಾಪಿಸಲು ಮತ್ತು ರಾಜ್ಯ ಸರ್ಕಾರದಿಂದ ಅನುಮೋದಿಸಲಾದ “ಮುಖ್ಯಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು ಕೇಂದ್ರ ಸರ್ಕಾರದಿಂದ ಅನುಮೋದಿಸಲಾದ “ಪ್ರಧಾನಮಂತ್ರಿ ಕೌಶಲ್ಯ ಕರ್ನಾಟಕ ಯೋಜನೆ” ಮತ್ತು “ಸಂಕಲ್ಪ ಯೋಜನೆ”ಗಳನ್ನು ಕೌಶಲ್ಯಾಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ. ಈ ವಿಶೇಷ ಅಭಿವೃದ್ಧಿ ವಾಹಕವು ರೂ.5.00 ಕೋಟಿ ಅಧಿಕೃತ ಷೇರು ಬಂಡವಾಳ ರೂ.1.00 ಕೋಟಿ Paid up capital. ರೂ.100.00 ಮುಖಬೆಲೆಯ ರೂ.5.00 ಲಕ್ಷ ಇಕ್ವೀಟಿ ಷೇರುಗಳನ್ನು ಹೊಂದಲು ಅವಕಾಶ ಕಲ್ಪಿಸಲಾಗಿದೆ. ಈ ಸರ್ಕಾರಿ ಸಂಸ್ಥೆಗೆ 6 ಜನ ನಿರ್ದೇಶಕರನ್ನು ನೇಮಕ ಮಾಡಲು ಅವರಲ್ಲಿ 3 ಜನ ಪುರುಷ ಸರ್ಕಾರೇತರ 2 ಮಹಿಳಾ ಸರ್ಕಾರೇತರ ಹಾಗೂ ನಿರ್ದೇಶಕರು, ಐಟಿಬಿಟಿ ನಿರ್ದೇಶಕರಾಗಿರುತ್ತಾರೆಂದು ಸಚಿವರು ತಿಳಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಮಲ್ಲಿಗೆಯ ಮೈಸೂರಲಿ…

ಮಲ್ಲಿಗೆಯ ಮೈಸೂರಲಿ... ತಾಯಿ ಚಾಮುಂಡಿ ಮಡಿಲಲಿ ಮಲ್ಲಿಗೆಯ ಮೈಸೂರಲಿ ಅದ್ಧೂರಿ ಜಂಬೂ ಸವಾರಿ ಈ ಬಾರಿ, ಅಂಬಾರಿ ಹೊತ್ತ ಮೊದಲ…

2 hours ago

ಓದುಗರ ಪತ್ರ: ಬಯೋಮೆಟ್ರಿಕ್ ಪರಿಶೀಲನೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ

ಇ -ಸಿಮ್ ತಂತ್ರeನದ ದುರ್ಬಳಕೆಯಿಂದ ಎಟಿಎಂ ಹಾಗೂ ಯುಪಿಐ ನಿಷ್ಕ್ರಿಯಗೊಂಡಿದ್ದರೂ ರೂ. ೪ ಲಕ್ಷದವರೆಗೆ ಸೈಬರ್ ವಂಚನೆ ನಡೆಯು ತ್ತಿರುವುದು…

2 hours ago

ಓದುಗರ ಪತ್ರ: ಅಂಗ್ ಸಾನ್ ಸೂಕಿಗೆ ಬೇಕು ವಿಶ್ವ ಸಮುದಾಯದ ಬೆಂಬಲ

ಮ್ಯಾನ್ಮಾರ್ ಸೇನೆಯು ಅಂಗ್ ಸಾನ್ ಸೂಕಿ ಅವರ ಚುನಾಯಿತ ಸರ್ಕಾರವನ್ನು ೨೦೨೧ ರ -ಬ್ರವರಿಯಲ್ಲಿ ಕೆಳಗಿಳಿಸಿ ಅಧಿಕಾರ ಕಸಿದುಕೊಂಡು ಬಂಧಿಸಿ,…

2 hours ago

ಅಭಿಮನ್ಯು: ಇನ್ನು ದಸರಾ ಚೌಕಟ್ಟಿನಲ್ಲಿ ಸಿಗದವನಾದನು

ಶ್ರೇಯಸ್ ದೇವನೂರು ಮುಂದಿನ ಜಂಬೂಸವಾರಿಯ ಆನೆಗಳ ಸಾಲಿನಲ್ಲಿ ಕಾಣಸಿಗನು ಕೆಲವು ಕ್ಷಣಗಳನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಬಹುದು. ಆದರೆ ಆ ಕ್ಷಣಗಳಲ್ಲಿ ಮನಸ್ಸು…

2 hours ago

ಜ್ಞಾನೇಶ್ ಕುಮಾರ್‌ರನ್ನು ಜನರ ಎದುರು ನಿಲ್ಲಿಸೀಪ್ಪಾ!

ಇಂಡಿಯಾ ಟುಡೇ ಸಂದರ್ಶನದಲ್ಲಿ ಪ್ರಕಾಶ್‌ ರಾಜ್‌ ಆಗ್ರಹ  ಬಹುಭಾಷಾ ನಟ ಪ್ರಕಾಶ್ ರಾಜ್ ಅವರು ಕಾರಿನಲ್ಲಿ ಸಾಗುತ್ತಿದ್ದಾಗ ಇಂಡಿಯಾ ಟುಡೇಯ ರಾಜದೀಪ್…

2 hours ago

ಅರಮನೆ, ಮೃಗಾಲಯಕ್ಕೆ ಪ್ರವಾಸಿಗರ ಲಗ್ಗೆ

ಕೇಶವ್ ಎಂ. ಅರಮನೆಗೆ ೨,೧೯,೯೧೮ ಮಂದಿ, ಮೃಗಾಲಯಕ್ಕೆ ೧.೫೭ ಲಕ್ಷ ಮಂದಿ ಭೇಟಿ ಮೈಸೂರು: ದಸರಾ  ಮಹೋತ್ಸವದ ಹಿನ್ನೆಲೆಯಲ್ಲಿ ಅರಮನೆ…

3 hours ago