ಕೊಟ್ಟಿಗೆಹಾರ : ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಪ್ರವಾಸಿತಾಣ ದೇವರುಮನೆ ಗುಡ್ಡದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.
ದೇವರು ಮನೆ ಗುಡ್ಡದ ರಸ್ತೆ ತಿರುವಿನಲ್ಲಿ ಶವ ಪತ್ತೆಯಾಗಿದ್ದು, ಯುವಕನನ್ನ ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.
ಗುರುತು ಸಿಗದ ರೀತಿಯಲ್ಲಿ ಶವ ಪತ್ತೆಯಾಗಿದ್ದು, ಪ್ರವಾಸಿಗರು ಶವ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಣಕಲ್ ಪೊಲೀಸರು ಭೇಟಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ.