Mysore
29
clear sky

Social Media

ಶನಿವಾರ, 13 ಡಿಸೆಂಬರ್ 2025
Light
Dark

ಸದ್ಗುರು ಮಾತಿನಲ್ಲಿ ಆಳವಾದ ತತ್ವ: ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್‌ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್‌ ಸಂತಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿ ಡಿಸಿಎಂ ಡಿಕೆ ಶಿವಕುಮಾರ್‌, ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಎನಿಸಿತು. ನನ್ನ ಹೆಸರಿನಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.

ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಹೆಣ್ಣಮಕ್ಕಳಿಗೆ ಕೆಂಪಮ್ಮ ಅಂತ, ಗಂಡು ಮಕ್ಕಳೂ ಹುಟ್ಟಿದರೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಶಿವಾಲ್ದಪ್ಪನಿಗೆ ನಮ್ಮ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ಮೊದಲು ಕೆಂಪರಾಜ್‌ ಅಂತ ಹೆಸರಿಟ್ಟು, ನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್‌ ಅಂತ ಹೆಸರಿಟ್ಟರು ಎಂದು ವಿವರಿಸಿದ್ದಾರೆ.

ಹಾಗೆಯೇ ಸದ್ಗುರು ಅವರ ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್‌ಗಳು ಮನಸ್ಸಿಗೆ ಹಿತ ನೀಡಿದವು ಎಂದು ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.

Tags:
error: Content is protected !!