ಬೆಂಗಳೂರು: ಸದ್ಗುರು ಮಾತಿನಲ್ಲಿ ಆಳವಾದ ತತ್ವಗಳಿರುತ್ತವೆ ಎಂದು ಟ್ವೀಟ್ ಮಾಡುವ ಮೂಲಕ ಇಶಾ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಡಿಸಿಎಂ ಡಿಕೆ ಶಿವಕುಮಾರ್, ಸದ್ಗುರು ಅವರು ಪ್ರತಿ ಶಿವರಾತ್ರಿಯಂದು ನಡೆಸಿಕೊಡುವ ಕಾರ್ಯಕ್ರಮದ ಬಗ್ಗೆ ಕೇಳಿದ್ದೆ, ಕಣ್ಣಾರೆ ನೋಡಿ ಇದು ಶಿವಭಕ್ತಿಯ ಶಿಖರ ಎನಿಸಿತು. ನನ್ನ ಹೆಸರಿನಲ್ಲೇ ಶಿವನಿದ್ದಾನೆ. ಅದರ ಹಿಂದೆ ಸ್ವಾರಸ್ಯಕರ ಸಂಗತಿ ಇದೆ.
ದೊಡ್ಡ ಆಲಹಳ್ಳಿಯಲ್ಲಿ ಶಿವಾಲ್ದಪ್ಪನ ಬೆಟ್ಟ ಇದೆ. ನಮ್ಮ ಮನೆಯಲ್ಲಿ ಯಾರೇ ಹುಟ್ಟಿದರೂ ಹೆಣ್ಣಮಕ್ಕಳಿಗೆ ಕೆಂಪಮ್ಮ ಅಂತ, ಗಂಡು ಮಕ್ಕಳೂ ಹುಟ್ಟಿದರೆ ಕೆಂಪೇಗೌಡ ಅಂತ ಹೆಸರಿಡುತ್ತಾರೆ. ಶಿವಾಲ್ದಪ್ಪನಿಗೆ ನಮ್ಮ ತಾಯಿ ಹರಕೆ ಮಾಡಿಕೊಂಡಿದ್ದರು. ನಾನು ಹುಟ್ಟಿದ್ದಕ್ಕೆ ಮೊದಲು ಕೆಂಪರಾಜ್ ಅಂತ ಹೆಸರಿಟ್ಟು, ನಂತರ ಶಿವಾಲ್ದಪ್ಪನಿಗಾಗಿ ಶಿವಕುಮಾರ್ ಅಂತ ಹೆಸರಿಟ್ಟರು ಎಂದು ವಿವರಿಸಿದ್ದಾರೆ.
ಹಾಗೆಯೇ ಸದ್ಗುರು ಅವರ ಮಾತಿನಲ್ಲಿ ಆಳವಾದ ತತ್ವಗಳ ಜೊತೆ ಸೌಮ್ಯವಾದ ಹಾಸ್ಯ ಸಂಯೋಜನೆ ಇರುತ್ತದೆ. ಬದುಕಿನ ಒಳಹುಗಳ ಬಗ್ಗೆ ಸುದೀರ್ಘವಾಗಿ ಮಾತನಾಡಿದೆವು. ಗಂಭೀರ ವಿಚಾರಗಳ ಮಧ್ಯೆ, ಹಾಸ್ಯದ ಝಲಕ್‌ಗಳು ಮನಸ್ಸಿಗೆ ಹಿತ ನೀಡಿದವು ಎಂದು ಟ್ವೀಟ್‌ನಲ್ಲಿ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…