ಪುತ್ತೂರು : ಬರುವ ದೀಪಾವಳಿ ಹಬ್ಬದ ದಿನದಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಗೋಪೂಜೆ ನಡೆಸುವಂತೆ ಧಾರ್ಮಿಕ ದತ್ತಿ ಇಲಾಖಾ ಆಯುಕ್ತರು ಆದೇಶಿಸಿದ್ದಾರೆ.
ಹಿಂದೂ ಧರ್ಮದಲ್ಲಿ ಗೋಪೂಜೆಗೆ ತನ್ನದೆ ಆದ ಮಹತ್ವವಿದೆ. ಹಲವಾರು ವರ್ಷಗಳಿಂದಲೂ ಕಾಲ ಕಾಲಕ್ಕೆ ತಕ್ಕಂತೆ ಗೋಪೂಜೆ ಮಾಡಿಕೊಂಡು ಬರುತ್ತಿರುವ ನಮ್ಮ ಹಿಂದೂ ಸಂಸ್ಕೃತಿಯಲ್ಲಿ ಮಹತ್ವದ ಸ್ಥಾನವಿದೆ ಹೀಗಾಗಿ ಅ.26 ರ ಬಲಿಪಾಢ್ಯಮಿ ದಿನದಂದು ರಾಜ್ಯದ ಎಲ್ಲಾ ಇಲಾಖಾ ವ್ಯಾಪ್ತಿಯ ದೇವಾಲಯಗಳಲ್ಲಿ ಗೋವುಗಳಿಗೆ ಸ್ನಾಮ ಮಾಡಿಸಿ ದೇವಾಲಯಕ್ಕೆ ಕರೆತಂದು ಕುಂಕುಮ,ಹೂವುಗಳಿಂದ ಅಲಂಕರಿಸಿ ಅಕ್ಕಿ,ಬೆಲ್ಲ,ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಹಸುವಿಗೆ ನೀಡಿ ತಿನಿಸಿ, ಧೂಪ,ದೀಪಗಳಿಂದ ಪೂಜಿಸಿ ಸಮಸ್ಕರಿಸುವ ವ್ಯವಸ್ಥೆಯನ್ನು ಮಾಡುವ ಮೂಲಕ ಸದರಿ ದಿನದಂದು ಸಂಜೆ 5.30 ರಿಂದ 6.30ರವರೆಗೆ ಗೋದಾಳಿ+ಲಗ್ನದಲ್ಲಿ ಗೋಪೂಜೆ ಕಾರ್ಯಕ್ರಮವನ್ನು ನಡೆಸಬೇಕು. ಈ ಸಂಬಂಧ ಭಕ್ತಾಧಿಗಳು, ಸಾರ್ವಜನಿಕರು ಮಾಹಿತಿಗಾಗಿ ದೇವಸ್ಥಾನಗಳ ಸೂಚನಾ ಫಲಕಗಳಲ್ಲಿ ಸ್ಥಳೀಯ ಮಾಧ್ಯಮಗಳಲ್ಲಿ ಪ್ರಚುರಪಡಿಸುವುದು ಹಾಗೂ ಸ್ಥಳೀಯ ಪ್ರತಿನಿಧಿಗಲಿಗೆ ಈ ವಿಶೇಷ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿ ಅವರುಗಳ ಸಹಕಾರ ಪಡೆಯಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.