The Union Minister for Finance and Corporate Affairs, Smt. Nirmala Sitharaman briefing the media on Post 50th meeting of GST Council, in New Delhi on July 11, 2023.
ಬೆಂಗಳೂರು : ಈ ಹಿಂದೆ ನಟ-ನಟಿಯರ ಫೋಟೋಗಳನ್ನು ಡೀಪ್ ಫೇಕ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗುತ್ತಿತ್ತು. ಆದರೆ, ಇದೀಗ ಅದು ರಾಜಕಾರಣಿಗಳೂ ತಟ್ಟಿದ್ದು, ಮತ್ತೆ ಇದರ ಟ್ರೆಂಡ್ ಶುರುವಾಗಿದೆ. ಈ ಬಾರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಟಾರ್ಗೆಟ್ ಆಗಿದ್ದಾರೆ. ಈ ಬಗ್ಗೆ ಬೆಂಗಳೂರಿನ ಮಲ್ಲೇಶ್ವರಂ ಪೋಲಿಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಣಕಾಸು ಹೂಡಿಕೆ ಯೋಜನೆ ಉದ್ದೇಶಿಸಿ ಮಾತನಾಡಿರುವ ವೀಡಿಯೋವನ್ನು ಎಡಿಟ್ ಮಾಡಿ ಸಾಮಾಜಿಕ ಜಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಸುಳ್ಳು ಡೀಪ್ ಫೇಕ್ ವೀಡಿಯೋ ಮಾಡಿ ಸಾರ್ವಜನಿಕರಿಗೆ ಪ್ರಚೋದನೆ ನೀಡಿದ್ದಾರೆ ಎಂದು ದೂರು ದಾಖಲಾಗಿದೆ. ಇದೀಗ ಈ ಬಗ್ಗೆ ಆರೋಪಿಗಳ ಪತ್ತೆಗೆ ಕಾರ್ಯಚರಣೆ ನಡೆಯುತ್ತಿದೆ ಎಂದು ಹೇಳಲಾಗಿದೆ.
ಇದನ್ನು ಓದಿ: ಮಲ್ಲಿಕಾರ್ಜುನ ಖರ್ಗೆ ಭುಜಕ್ಕೆ ಮಸಾಜ್ ಮಾಡಿದ ರಾಹುಲ್ ಗಾಂಧಿ! ವಿಡಿಯೊ ವೈರಲ್… ಇಂಟರ್‌ನೆಟ್ ಓದುಗರಿಂದಲೂ ಪ್ರಶಂಸೆ…
ಭಾರತದ ಹಣಕಾಸು ಸಚಿವರಾದ ನಿರ್ಮಾಲಾ ಸೀತಾರಾಮನ್ ಅವರ ವಿಡಿಯೋವನ್ನು ಡೀಪ್ ಫೇಕ್ ಮಾಡಿ, ಫೇಸ್ ಬುಕ್ನಲ್ಲಿ ಹಂಚಿಕೊಂಡಿದ್ದಾರೆ ಎಂದು ಮಲ್ಲೇಶ್ವರಂ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ರಮೇಶ್ ಎಸ್ ಅವರು ದೂರು ನೀಡಿದ್ದಾರೆ. ಹಣಕಾಸಿನ ಹೂಡಿಕೆ ಯೋಜನೆಯನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಡೀಪ್ ಫೇಕ್ ಮಾಡಿ ಅದನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದರಿಂದ ಜನರಿಗೆ ತಪ್ಪು ಮಾಹಿತಿ ಹೋಗುತ್ತಿದೆ. ಹೂಡಿಕೆ ಮಾಡುವ ವ್ಯಕ್ತಿಗೆ ಇದು ಆರ್ಥಿಕ ನಷ್ಟವನ್ನು ಉಂಟು ಮಾಡುವ ಸಾಧ್ಯತೆ ಇದೆ. ಸರ್ಕಾರ ಹಾಗೂ ಸಾರ್ವಜನಿಕ ಸಂಸ್ಥೆಗಳ ಮೇಲೆ ದೊಡ್ಡ ಪರಿಣಾಮವನ್ನುಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಕೃತ್ಯದಲ್ಲಿ ಶಾಮೀಲಾದವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಈ ಎಫ್ಐಆರ್ನಲ್ಲಿ ತಿಳಿಸಿದ್ದಾರೆ.
ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…
ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್ ಅಹಮ್ಮದ್ ಖಾನ್ ವ್ಯಂಗ್ಯವಾಡಿದ್ದಾರೆ. ಈ ಕುರಿತು…
ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್ ರಿತ್ತಿ ಕುಟುಂಬಕ್ಕೆ…
ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್ ಬೋಟ್ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು…
ಬೆಂಗಳೂರು: ಬ್ಯಾಂಕಿಂಗ್ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…