ರಾಜ್ಯ

ಮೈಸೂರು ದಸರಾದಲ್ಲಿ ಏರ್‌ಶೋ ನಡೆಸಲು ರಕ್ಷಣಾ ಇಲಾಖೆ ಅನುಮತಿ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ ಈ ಬಾರಿ ಏರ್‌ಶೋ ನಡೆಸಲು ಕೇಂದ್ರ ರಕ್ಷಣಾ ಇಲಾಖೆ ಅನುಮತಿ ನೀಡಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಅವರಿಗೆ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಪತ್ರ ಬರೆದಿರುವ ಸಿಎಂ ಸಿದ್ದರಾಮಯ್ಯ ಅವರು, ಕರ್ನಾಟಕ ಸರ್ಕಾರ, ರಾಜ್ಯದ ಜನತೆಯ ಪರವಾಗಿ ಧನ್ಯವಾದಗಳು. ಮೈಸೂರು ದಸರಾಗೆ ತನ್ನದೇ ಆದ ಇತಿಹಾಸವಿದೆ. ನಾಡಹಬ್ಬ ದಸರಾ ನೋಡಲು ಲಕ್ಷಾಂತರ ಜನರು ಬರುತ್ತಾರೆ. ಶ್ರದ್ಧಾ, ಭಕ್ತಿಗೆ ಸಾಕ್ಷಿಯಾದ ಮೈಸೂರು ದಸರಾದಲ್ಲಿ ಏರ್‌ಶೋಗೆ ಅನುಮತಿ ನೀಡಿರುವುದಕ್ಕೆ ಧನ್ಯವಾದಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇನ್ನು ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಈಗಾಗಲೇ ಸಿದ್ಧತೆಗಳು ನಡೆಯುತ್ತಿದ್ದು, ಗಜಪಡೆಗಳು ಆಗಮಿಸಿ ತಾಲೀಮು ನಡೆಸುತ್ತಿವೆ. ಅಲ್ಲಲ್ಲಿ ರಸ್ತೆಗಳ ದುರಸ್ತಿ ಕಾರ್ಯ ಕೈಗೊಳ್ಳಲಾಗಿದ್ದು, ದಸರಾ ಬರುವ ಮುನ್ನವೇ ಎಲ್ಲಾ ಕೆಲಸಗಳು ಮುಗಿಯಲಿವೆ.

ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು, ಏರ್‌ಶೋ ಸೇರಿದಂತೆ ಹಲವು ಕಾರ್ಯಕ್ರಮಗಳು ಜರುಗಲಿವೆ. ಈ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ದಸರಾ ಆಚರಣೆ ಮಾಡಲಾಗುತ್ತಿದ್ದು, ಜಂಬೂಸವಾರಿ ದಿನದಂದು ಲಕ್ಷಾಂತರ ಜನರು ಸೇರುವ ನಿರೀಕ್ಷೆಯಿದೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆ.ಕೆ.ಮಹಮದ್ ಅವರ ಹೇಳಿಕೆ ಪ್ರಬುದ್ಧ ನಡೆ

ಕೇರಳದ ಕೋಯಿಕ್ಕೋಡಿನಲ್ಲಿ ಸುದ್ದಿಸಂಸ್ಥೆಯೊಂದಕ್ಕೆ ಸಂದರ್ಶನ ನೀಡಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ (ಎಎಸ್‌ಐ) ಮಾಜಿ ಪ್ರಾದೇಶಿಕ ನಿರ್ದೇಶಕರಾದ ಕೆ.ಕೆ. ಮಹಮ್ಮದ್…

22 mins ago

ಓದುಗರ ಪತ್ರ: ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ನಾಗರಿಕ ಸ್ನೇಹಿ

ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು…

25 mins ago

ಓದುಗರ ಪತ್ರ: ದ್ವೇಷ ಭಾಷಣಕ್ಕೆ  ಕಾನೂನು ಕಡಿವಾಣ ಸಾಗತಾರ್ಹ

ರಾಜ್ಯದಲ್ಲಿ ಇನ್ನು ಮುಂದೆ, ಜಾತಿ, ಧರ್ಮ ಭಾಷೆ, ಧಾರ್ಮಿಕ ಮತ್ತು ಜನಾಂಗೀಯ ನಿಂದನೆ, ಲೈಂಗಿಕ ದೃಷ್ಟಿಕೋನ ಮತ್ತು ಜನ್ಮ ಸ್ಥಳದ…

39 mins ago

ಡಾ.ಬಿ.ಆರ್.ಅಂಬೇಡ್ಕರ್ ಎಂಬ ಅಮರ ಜಗತ್ತು…

ಮಲ್ಕುಂಡಿ ಮಹದೇವಸ್ವಾಮಿ ವಿಕಲ್ಪಗಳ ಅಲೆಯ ಮೇಲೆ ಸದಾ ತೇಲಿ ಬರುವ ಸಂಕಲ್ಪ  ಬಾಬಾ ಸಾಹೇಬರ ಪಾರ್ಥಿವ ಶರೀರ ಪ್ರಕೃತಿಯಲ್ಲಿ ಲೀನವಾಗುವ…

45 mins ago

ರೈಲ್ವೆ ಮೇಲ್ಸೇತುವೆ; ಭೂ ದರ ಕಗ್ಗಂಟು ಬಗೆಹರಿಯುವುದೇ?

ಚಾಮರಾಜನಗರ: ಚಾ.ನಗರ-ನಂಜನಗೂಡು ಹೆದ್ದಾರಿಯಲ್ಲಿರುವ ಪಣ್ಯದಹುಂಡಿ ಬಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸ್ವಾಧಿನಪಡಿಸಿಕೊಂಡಿರುವ ಭೂಮಿಯ ದರ ನಿಗದಿ ಕಗ್ಗಂಟಿನ ವಿಚಾರ ಅಂತಿಮ…

3 hours ago

ಜನವರಿಗೆ ಚಾ.ಬೆಟ್ಟದ ಅಭಿವೃದ್ಧಿ ಕಾಮಗಾರಿ ಶುರು

ಮೈಸೂರು: ಪ್ರಸಿದ್ಧ ಯಾತ್ರಾ ಸ್ಥಳ ಚಾಮುಂಡಿ ಬೆಟ್ಟದ ಸಮಗ್ರ ಅಭಿವೃದ್ಧಿ ಕಾಮಗಾರಿಯು ಕೇಂದ್ರ ಸರ್ಕಾರದ ಪ್ರಸಾದ ಯೋಜನೆಯಡಿ ಜನವರಿ ಮೊದಲ…

4 hours ago