ದಾವಣಗೆರೆ: ನಮ್ಮವರೇ ದ್ವೇಷ ಸಾಧಿಸಿ ಶತ್ರುವನ್ನು ಬಲಿಷ್ಟ ಮಾಡಿದ್ದಾರೆ ಎಂದು ಸಚಿವ ಕೆ.ಎನ್.ರಾಜಣ್ಣ ಹೈಕಮಾಂಡ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ದೆಹಲಿ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯ ಸೋಲು ಅನುಭವಿಸಿರುವ ಕುರಿತು ಮಾತನಾಡಿದ ಅವರು, ಏನೇ ಇದ್ದರೂ ತಪ್ಪನ್ನು ಮುಂದಿಟ್ಟುಕೊಂಡು ಶತ್ರುವನ್ನು ಬಲಿಷ್ಟ ಮಾಡಬಾರದು. ಈಗ ದೆಹಲಿಯಲ್ಲಿ ಆಗಿರೋದು ಅದೇ. ರಾಷ್ಟ್ರ ರಾಜಕಾರಣವನ್ನು ಅರಿತು ಶತ್ರುವನ್ನು ಸೋಲಿಸಬೇಕು. ಜಾತ್ಯಾತೀತರು ಒಂದಾಗಿ, ಜಾತಿಯನ್ನು ಸೋಲಿಸಬೇಕು ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಮತ ವಿಭಜನೆಯಿಂದ ಬಿಜೆಪಿ ಗೆದ್ದಿದೆ. ನಮ್ಮವರೇ ದ್ವೇಷ ಸಾಧಿಸಿಕೊಂಡು ಶತ್ರುವನ್ನು ಬಲಿಷ್ಠ ಮಾಡಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಇನ್ನು ಎಸ್‌ಸಿ, ಎಸ್‌ಟಿ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಹಾಗೂ ಸಮುದಾಯ ಬಲಿಷ್ಟ ಮಾಡುವುದು ಸಮಾವೇಶದ ಪ್ರಮುಖ ಉದ್ದೇಶವಾಗಿದೆ. ಕಾಂಗ್ರೆಸ್ ನೇತೃತ್ವದಲ್ಲಿ ಎಸ್‌ಸಿ, ಎಸ್‌ಟಿ ಸಮಾವೇಶ ಮಾಡುತ್ತೇವೆ. ರಾಜಕೀಯ ವಂಚಿತ ಸಮುದಾಯಗಳಿಗೆ ಅನುಕೂಲ ಮಾಡುವ ಉದ್ದೇಶವಿದೆ. ಸಮಾವೇಶ ಮಾಡೇ ಮಾಡುತ್ತೇವೆ ಎಂದರು.





