ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು.
ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಅತಿಥಿ ಉಪನ್ಯಾಸಕ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.
ಇದನ್ನು ಓದಿ: ಸ್ಟಾರ್ ಆಲ್‌ರೌಂಡರ್‌ಗಳನ್ನು ಕೈಬಿಟ್ಟಿರುವ ಆರ್‌ಸಿಬಿಗೆ ಹಿನ್ನಡೆ ಆಗಬಹುದು: ಎಬಿಡಿ
ಬೆಂಗಳೂರಿನ ಸಂಜಯ್ ನಗರದಲ್ಲಿರುವ ಉನ್ನತ ಶಿಕ್ಷಣ ಸಚಿವ ಸುಧಾಕರ್ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಕಳುಹಿಸಿದರು.
ಇನ್ನು ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರದ ವಿಳಂಬ ನೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…