ರಾಜ್ಯ

ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ: ಭುಗಿಲೆದ್ದ ಎಬಿವಿಪಿ ಪ್ರತಿಭಟನೆ

ಬೆಂಗಳೂರು: ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಆರಂಭವಾಗಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್‌ ಕಾರ್ಯಕರ್ತರು ಬೀದಿಗಿಳಿದು ಹೋರಾಟ ನಡೆಸಿದರು.

ಅತಿಥಿ ಉಪನ್ಯಾಸಕರ ನೇಮಕ ವಿಚಾರವಾಗಿ ಸರ್ಕಾರ ಬೇಜವಾಬ್ದಾರಿ ತೋರುತ್ತಿದ್ದು, ಅನಗತ್ಯ ವಿಳಂಬ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಖಂಡಿಸಿ ಎಬಿವಿಪಿ ಕಾರ್ಯಕರ್ತರು ಅತಿಥಿ ಉಪನ್ಯಾಸಕ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಪ್ರತಿಭಟನೆ ತೀವ್ರಗೊಳಿಸಿದರು.

ಇದನ್ನು ಓದಿ: ಸ್ಟಾರ್‌ ಆಲ್‌ರೌಂಡರ್‌ಗಳನ್ನು ಕೈಬಿಟ್ಟಿರುವ ಆರ್‌ಸಿಬಿಗೆ ಹಿನ್ನಡೆ ಆಗಬಹುದು: ಎಬಿಡಿ

ಬೆಂಗಳೂರಿನ ಸಂಜಯ್‌ ನಗರದಲ್ಲಿರುವ ಉನ್ನತ ಶಿಕ್ಷಣ ಸಚಿವ ಸುಧಾಕರ್‌ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಕಳುಹಿಸಿದರು.

ಇನ್ನು ರಾಜ್ಯದ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿಯೂ ಪ್ರತಿಭಟನೆ ನಡೆಯುತ್ತಿದ್ದು, ಸರ್ಕಾರದ ವಿಳಂಬ ನೀತಿಗೆ ಭಾರೀ ವಿರೋಧ ವ್ಯಕ್ತವಾಗಿದೆ.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

16 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

18 hours ago