Mysore
14
broken clouds

Social Media

ಭಾನುವಾರ, 21 ಡಿಸೆಂಬರ್ 2025
Light
Dark

ಕ್ಯಾಂಪಾ ನಿಧಿಗಾಗಿ ಕೇಂದ್ರಕ್ಕೆ ದ.ರಾಜ್ಯಗಳ ಅರಣ್ಯ ಸಚಿವರುಗಳ ನಿಯೋಗ: ಈಶ್ವರ ಖಂಡ್ರೆ

ದಕ್ಷಿಣ ರಾಜ್ಯಗಳ ಅರಣ್ಯ ಸಚಿವರಿಗೆ ಶೀಘ್ರವೇ ಪತ್ರ – ಈಶ್ವರ ಖಂಡ್ರೆ

ಬೆಂಗಳೂರು: ಪರಿಹಾರಾತ್ಮಕ ಅರಣ್ಯೀಕರಣ ನಿಧಿ ನಿರ್ವಹಣೆ ಮತ್ತು ಯೋಜನಾ ಪ್ರಾಧಿಕಾರ (ಕ್ಯಾಂಪಾ) ರಾಜ್ಯಗಳಿಂದ ಸಂಗ್ರಹವಾದ ಹಣವನ್ನು ಬಿಡುಗಡೆ ಮಾಡಲು ಮೀನಾಮೇಷ ಎಣಿಸುತ್ತಿದ್ದು, ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗವನ್ನು ಕೇಂದ್ರಕ್ಕೆ ತೆಗೆದುಕೊಂಡು ಹೋಗುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಇಲಾಖೆಯ ಕ್ಯಾಲೆಂಡರ್ ಬಿಡುಗಡೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿಗಳು ಕಾಡಿನಿಂದ ಹೊರಬರುತ್ತಿದ್ದು, ಅವು ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗುತ್ತಿವೆ, ಮಾನವ -ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದೆ. ರೈಲ್ವೆ ಬ್ಯಾರಿಕೇಡ್ ಅಳವಡಿಸಲು, ಕಾರಿಡಾರ್ ನಿರ್ಮಿಸಲು ಕ್ಯಾಂಪಾದಲ್ಲಿರುವ ರಾಜ್ಯದ 1400 ಕೋಟಿ ರೂ. ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ. ಹೀಗಾಗಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವರ ಬಳಿಗೆ ದಕ್ಷಿಣ ರಾಜ್ಯಗಳ ಅರಣ್ಯ ಸಚಿವರ ನಿಯೋಗ ತೆಗೆದುಕೊಂಡು ಹೋಗಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದು, ಶೀಘ್ರವೇ ಎಲ್ಲ ಸಚಿವರಿಗೂ ಪತ್ರ ಬರೆಯಲಾಗುವುದು ಎಂದರು.

ಆಗಸ್ಟ್ 12ರಂದು ಬೆಂಗಳೂರಿನಲ್ಲಿ ನಡೆದ ಮಾನವ-ಆನೆ ಸಂಘರ್ಷ ಕುರಿತ ಅಂತಾರಾಷ್ಟ್ರೀಯ ಸಮ್ಮೇಳನದ ಸಂದರ್ಭದಲ್ಲಿ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಜಾರ್ಖಂಡ್ ರಾಜ್ಯದ ಸಚಿವರು ಕೂಡ ಕೇಂದ್ರಕ್ಕೆ ನಿಯೋಗದಲ್ಲಿ ಆಗಮಿಸಲು ಸಮ್ಮಿತಿಸಿದ್ದರು ಎಂದು ತಿಳಿಸಿದರು.

Tags:
error: Content is protected !!