ರಾಜ್ಯ

ಕ್ಯಾಂಪಾ ಹಣಕ್ಕಾಗಿ ಕೇಂದ್ರಕ್ಕೆ ನಿಯೋಗ: ಈಶ್ವರ ಖಂಡ್ರೆ ನೇತೃತ್ವದ ಸಚಿವರ ಸಭೆಯಲ್ಲಿ ನಿರ್ಣಯ

ಬೆಂಗಳೂರು: ಆನೆಗಳು ನಾಡಿಗೆ ಬಾರದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಉತ್ತಮ ಸಾಧನವಾಗಿದ್ದು, ಇದರ ನಿರ್ಮಾಣಕ್ಕೆ ಹೆಚ್ಚಿನ ಹಣಕಾಸಿನ ಅಗತ್ಯವಿದೆ. ಆದರೆ, ಕೇಂದ್ರ ಸರ್ಕಾರ ನಮ್ಮ ಕ್ಯಾಂಪಾ ನಿಧಿಯನ್ನೇ ಇದಕ್ಕೆ ನೀಡುತ್ತಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಬೇಸರ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಜಿಕೆವಿಕೆ ಆವರಣದಲ್ಲಿ ಸೋಮವಾರ (ಆ.12) ನಡೆದ ಸಚಿವರ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕ್ಯಾಂಪಾ ಹಣವನ್ನು ರೈಲ್ವೆ ಬ್ಯಾರಿಕೇಡ್ ಗೆ ಬಿಡುಗಡೆ ಮಾಡುವ ಕುರಿತಂತೆ ಇಂದು ಇಲ್ಲಿ ಪಾಲ್ಗೊಂಡಿರುವ ಎಲ್ಲ ಸಚಿವರೂ ಕೇಂದ್ರ ಹವಾಮಾನ ಬದಲಾವಣೆ, ಪರಿಸರ ಮತ್ತು ಅರಣ್ಯ ಸಚಿವರಿಗೆ ಮನವಿ ಸಲ್ಲಿಸೋಣ ಎಂಬ ಸಲಹೆ ನೀಡಿದರು.

ಕೇರಳದ ಅರಣ್ಯ ಸಚಿವ ಎ.ಕೆ. ಸಸೀಂದ್ರನ್ ಈ ಉಪಕ್ರಮದ ನೇತೃತ್ವವನ್ನು ತಾವು ವಹಿಸುವುದಾಗಿ ಸ್ವಯಂ ಪ್ರೇರಿತವಾಗಿ ಪ್ರಕಟಿಸಿದರು. ಮಹಾರಾಷ್ಟ್ರ ಮತ್ತು ಇತರ ರಾಜ್ಯಗಳ ಅರಣ್ಯ ಸಚಿವರನ್ನೂ ಕರೆದುಕೊಂಡು ದೆಹಲಿಗೆ ನಿಯೋಗ ತೆರಳುವ ಮೂಲಕ ಕೇಂದ್ರ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲು ದಿನಾಂಕ ನಿಗದಿ ಮಾಡುವಂತೆ ಈಶ್ವರ ಖಂಡ್ರೆ ತಿಳಿಸಿದರು. ಸಭೆ ಸಮ್ಮತಿಸಿತು.

ಲಾಂಟನಾ ಮತ್ತು ಸನ್ನಾ ಸಮಸ್ಯೆ ಪರಿಹಾರಕ್ಕೆ ಬೇರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳ ಕುರಿತ ಚರ್ಚೆಯ ವೇಳೆ, ನಿರಂತರವಾಗಿ ಲಾಂಟನಾವನ್ನು ಮೂಲೋತ್ಪಾಟನೆ ಮಾಡುವುದೇ ಪರಿಹಾರ ಎಂಬ ಅಭಿಪ್ರಾಯ ವ್ಯಕ್ತವಾಯಿತು.
ಕೆಲವು ಆದಿವಾಸಿಗಳು ಲಾಂಟನಾದಿಂದ ಅಲಂಕಾರಿಕ ವಸ್ತು ಮತ್ತು ವನ್ಯಮೃಗಗಳ ಪ್ರತಿಕೃತಿ ನಿರ್ಮಾಣ ಮಾಡುತ್ತಿದ್ದು, ಅವರೇ ಸ್ವತಃ ಮುಂದೆ ಬಂದು ಲಾಂಟನಾ ಕಳೆ ತೆಗೆಯುವುದಾದರೆ ಅವರಿಗೆ ಅವಕಾಶ ಕೊಡುವ ಬಗ್ಗೆಯೂ ಚರ್ಚಿಸಲಾಯಿತು.

ಆನೆ-ಮಾನವ ಸಂಘರ್ಷದಲ್ಲಿ ಮೃತಪಟ್ಟವರಿಗೆ ಮತ್ತು ಬೆಳೆ ನಷ್ಟಕ್ಕೊಳಗಾದವರಿಗೆ ನೀಡಲಾಗುತ್ತಿರುವ ಪರಿಹಾರ, ಆನೆಗಳು ನಾಡಿಗೆ ಬಾರದಂತೆ ತಡೆಯಲು ಯಾವ ಯಾವ ರಾಜ್ಯದಲ್ಲಿ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂಬ ಬಗ್ಗೆ ಈಶ್ವರ ಖಂಡ್ರೆ ಅವರು ಇತರ ರಾಜ್ಯಗಳ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಮಾಹಿತಿ ಪಡೆದರು.

ಜಾರ್ಖಂಡ್ ನ ಅರಣ್ಯ ಸಚಿವ ಬೈದ್ಯನಾಥ್ ರಾಮ್, ತಮಿಳುನಾಡು ಅರಣ್ಯ ಸಚಿವ ಎಂ. ಮಥಿವೆಂಥನ್, ತೆಲಂಗಾಣ ಅರಣ್ಯ ಸಚಿವೆ ಕೊಂಡ ಸುರೇಖಾ ಪಾಲ್ಗೊಂಡಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕುಡಿಯುವ ನೀರಿಗೆ ಅಭಾವ

ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಕಪಿಲಾ ನದಿ ಪಕ್ಕದಲ್ಲೇ ಇದ್ದರೂ ಜನತೆಗೆ ಕುಡಿಯುವ ನೀರಿನ ಅಭಾವ ಎದುರಾಗಿದೆ. ಹಳ್ಳಿಗಳಿಗೆ ನದಿ…

3 hours ago

ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಭಾರೀ ಮಳೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಒಂದು ವಾರಗಳ ಕಾಲ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಪೂರ್ವವ ಮಧ್ಯ…

4 hours ago

ಓದುಗರ ಪತ್ರ: ಸರಗಳ್ಳತನಕ್ಕೆ ಕಡಿವಾಣ ಹಾಕಿ

ಇತ್ತೀಚೆಗೆ ಮೈಸೂರಿನಲ್ಲಿ ಸರಗಳ್ಳತನ ಪ್ರಕರಣಗಳು ವರದಿಯಾಗುತ್ತಿದ್ದು, ಮಹಿಳೆಯರು ಒಂಟಿಯಾಗಿ ರಸ್ತೆಯಲ್ಲಿ ಓಡಾಡಲು ಹೆದರುವಂತಾಗಿದೆ. ಎರಡು ದಿನಗಳ ಹಿಂದಷ್ಟೇ ನಮ್ಮ ಸಂಬಂಧಿಕರೊಬ್ಬರು…

4 hours ago

ಓದುಗರ ಪತ್ರ: ಬಿಗ್‌ಬಾಸ್ ಕಾರ್ಯಕ್ರಮ ನಿಲ್ಲಲಿ

ಕನ್ನಡದ ಖಾಸಗಿ ಚಾನೆಲ್‌ವೊಂದರಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್ ಸೀಸನ್-11 ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದು, ಸ್ಪರ್ಧಿಗಳು ನಿತ್ಯ ಜಗಳವಾಡುತ್ತಿರುವುದರಿಂದ ಕಾರ್ಯಕ್ರಮ ವೀಕ್ಷಿಸುವವರಿಗೆ ಕಿರಿಕಿರಿಯಾಗುತ್ತಿದೆ. ವಿವಿಧ…

4 hours ago

ಓದುಗರ ಪತ್ರ: ಪೊಲೀಸರಿಗೆ ಧನ್ಯವಾದಗಳು

ನಾಡಹಬ್ಬ ದಸರಾ ಮಹೋತ್ಸವದಲ್ಲಿ ಈ ಬಾರಿ ಜನ ಸಾಗರವೇ ಹರಿದು ಬಂದಿತ್ತು. ದಸರಾ ಅಂಗವಾಗಿ ಆಯೋಜಿಸಿದ್ದ ಯುವ ಸಂಭ್ರಮ, ಯುವ…

4 hours ago

ಓದುಗರ ಪತ್ರ: ಮುಷ್ಕರ ಮುಂದುವರಿದಿದೆ

ಸರ್ಕಾರವೇ ನಮ್ಮ ದೇವರಾಗಿದೆ ಮೇಲಾಧಿಕಾರಿಗಳ ಮೇಲೆ ಗೌರವವಿದೆ ಜನರ ಸಮಸ್ಯೆಗಳ ಅರಿವಿದೆ ಅವರಿಗಾದ ಅಡಚಣೆಗೆ ವಿಷಾದವಿದೆ ನಮಗೂ ಬದುಕಿದೆ. ನಮ್ಮದೂ…

4 hours ago