Mysore
30
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

ದೆಹಲಿ ವಿಧಾನಸಭೆ ಚುನಾವಣೆ: ಜಿ.ಪರಮೇಶ್ವರ್‌ ಪ್ರತಿಕ್ರಿಯೆ

ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಹೊರಬೀಳಲಿದೆ. ಚುನಾವಣಾ ಫಲಿತಾಂಶದಲ್ಲಿ ಮೈತ್ರಿ ಎಲ್ಲಾ ಕಾಲದಲ್ಲೂ ಒಂದೇ ರೀತಿ ಇರಲ್ಲ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.8) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ವಿಧಾನಸಭೆಯ ಚುನಾವಣೆಯಲ್ಲಿ ಇನ್ನೂ ಮತ ಎಣಿಕೆ ಪೂರ್ಣಗೊಂಡಿಲ್ಲ. ಸಂಪೂರ್ಣ ಫಲಿತಾಂಶ ಬರಲಿ. ನಂತರ ನಮ್ಮ ಪಕ್ಷ ಯಾವ ಕಾರಣಕ್ಕೆ ಹಿನ್ನೆಡೆಯಾಗಿದೆ ಎಂಬುದನ್ನು ಚರ್ಚಿಸೋಣ ಎಂದರು.

ದೇಶದಲ್ಲಿ ಪ್ರತಿಯೊಂದು ಚುನಾವಣೆಯೂ ವಿಭಿನ್ನವಾಗಿ ಬೀರಲಿದ್ದು, ಲೋಕಸಭಾ ಚುನಾವಣೆ ರಾಷ್ಟ್ರೀಯ ವಿಚಾರಗಳ ಮೇಲೆ ಚುನಾವಣೆ ನಡೆಯುತ್ತದೆ. ರಾಜ್ಯದ ಚುನಾವಣೆಯೂ ಅಷ್ಟೇ ಸ್ಥಳೀಯ ವಿದ್ಯಮಾನಗಳ ಮೇಲೆ ನಿರ್ಧಾರವಾಗುತ್ತದೆ. ಹೀಗಾಗಿ ಆಯಾಯ ರಾಜ್ಯದ ಹಿನ್ನಡೆ ಪರಿಣಾಮ ಬೀರಲ್ಲ ಎಂದು ಹೇಳಿದರು.

Tags:
error: Content is protected !!