ಬೆಂಗಳೂರು: ದೆಹಲಿಯಲ್ಲಿ ಫೆಬ್ರವರಿ.5ರಂದು ವಿಧಾನಸಭಾ ಚುನಾವಣೆ ನಡೆಸಯಲಿದ್ದು, ಕಾಂಗ್ರೆಸ್ ಮುಕ್ತ ಭಾರತಕ್ಕೆ ಕಾಂಗ್ರೆಸ್ ಸಹವರ್ತಿಗಳಿಂದಲೇ ಮುಹೂರ್ತ ಫಿಕ್ಸ್ ಆಗಿದೆ ಎಂದು ದೆಹಲಿ ಕಾಂಗ್ರೆಸ್ ವಿರುದ್ಧ ಕರ್ನಾಟಕ ರಾಜ್ಯ ಬಿಜೆಪಿ ವ್ಯಂಗ್ಯವಾಡಿದೆ.
ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಬಿಜೆಪಿಯೂ, ಇಂಡಿಯಾ ಎಂಬ ಹೆಸರಿನಲ್ಲಿ ಕಾಂಗ್ರೆಸ್ ರಚಿಸಿದ್ದ ಮೈತ್ರಿಕೂಟದಿಂದ ಇದೀಗ ಕಾಂಗ್ರೆಸ್ ಪಕ್ಷವನ್ನೇ ಹೊರಹಾಕಲಾಗಿದೆ. ಅಧಿಕಾರದ ಆಸೆಗಾಗಿ ಕಾಂಗ್ರೆಸ್ ಕಟ್ಟಿದ ಗೂಡಿನಿಂದ ಕಾಂಗ್ರೆಸ್ ಇಂಡಿಯಾ ಪಕ್ಷವೇ ಹೊರಬಿದ್ದಿದೆ. ದೆಹಲಿ ಅಸೆಂಬ್ಲಿ ಚುನಾವಣೆ ಕಾಂಗ್ರೆಸ್ ಪಾಲಿಗೆ ಅಕ್ಷರಶಃ ಅಂತಿಮಯಾತ್ರೆ ಎಂಬಂತಾಗಿದೆ. ಕಾಂಗ್ರೆಸ್ ಸಹವರ್ತಿ ಪಕ್ಷಗಳು ಸೇರಿಕೊಂಡು ಕಾಂಗ್ರೆಸ್ ಮುಕ್ತ ಭಾರತಕ್ಕೆ ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂದು ಟೀಕಿಸಿದೆ.
ಇಂಡಿಯಾ ಕೂಟದೊಳಗಿನ ಕಲಹವನ್ನು ಉಲ್ಲೇಖಿಸಿ ಒಕ್ಕೂಟದ ಪ್ರಮುಖ ನಾಯಕ ಜಮ್ಮು-ಕಾಶ್ಮೀರದ
ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇಂಡಿಯಾ ಒಕ್ಕೂಟವನ್ನೇ ಬರ್ಖಾಸ್ತು ಮಾಡಲು ಸಲಹೆ ನೀಡಿದ್ದಾರೆ. ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ಸಿನ ನಾಯಕತ್ವವನ್ನೇ ಇಂಡಿಯಾ ಒಕ್ಕೂಟದ ಮಿತ್ರ ಪಕ್ಷಗಳು ಟೀಕಿಸುತ್ತಿವೆ ಎಂದು ಲೇವಡಿ ಮಾಡಿದೆ.
ದೆಹಲಿ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿರುವುದು ಕಾಂಗ್ರೆಸ್ ವಿರುದ್ಧ ದೇಶದಾದ್ಯಂತ ಎದ್ದಿರುವ ಆಕ್ರೋಶದ ಅಲೆಗಳಿಗೆ ಸಾಕ್ಷಿಯಾಗಿದೆ. ಕಾಂಗ್ರೆಸ್ ಚಿಂತನೆಗಳು ಈ ದೇಶಕ್ಕೆ ಮಾರಕ ಎಂಬುದನ್ನು ಕಾಂಗ್ರೆಸ್ ಸಹವರ್ತಿಗಳೇ ಅರಿತುಕೊಂಡಿದ್ದಾರೆ ಎಂದು ವ್ಯಂಗ್ಯ ಮಾಡಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…