ಬೆಂಗಳೂರು: ದೆಹಲಿ ವಿಧಾನಸಭೆ ಚುನಾವಣೆ 2025ರ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಗೆಲುವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸುತ್ತಿದ್ದಾರೆ.
ರಾಜ್ಯ ಬಿಜೆಪಿಯಲ್ಲೂ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗುತ್ತಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಂಭ್ರಮಾಚರಣೆ ನಡೆಸಲಾಗಿದ್ದು, ಸಂಭ್ರಮಾಚರಣೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿಪಕ್ಷ ನಾಯಕ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಸಂಸದರು, ಶಾಸಕರು, ಪರಿಷತ್ ಸದಸ್ಯರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು, ಪ್ರಮುಖರು ಭಾಗಿಯಾಗಿದ್ದರು.
ಸಂಭ್ರಮಾಚರಣೆ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, 27 ವರ್ಷಗಳ ಬಳಿಕ ಬಿಜೆಪಿಗೆ ದೆಹಲಿಯಲ್ಲಿ ಅಭೂತಪೂರ್ವ ಗೆಲುವು ದೊರೆತಿದೆ. ದೆಹಲಿಯ ಪಕ್ಷದ ಎಲ್ಲಾ ಮುಖಂಡರಿಗೆ, ಪಕ್ಷದ ಕಾರ್ಯಕರ್ತರಿಗೆ, ಮತದಾರರಿಗೆ ಅಭಿನಂದನೆಗಳು ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಅರವಿಂದ್ ಕೇಜ್ರಿವಾಲ್ ವಿರುದ್ಧ ಕಿಡಿಕಾರಿದ್ದು, ಭ್ರಷ್ಟ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಮುಖವಾಡ ಕಳಚಿದೆ. ಆಮ್ ಆದ್ಮಿ ಪಕ್ಷದ ಬಣ್ಣ ಬಯಲಾಗಿದೆ ಎಂದು ಕಿಡಿಕಾರಿದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…