ಹುಬ್ಬಳ್ಳಿ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವರ ವ್ಯಕ್ತಿತ್ವಕ್ಕೆ ಒಳ್ಳೆಯದು ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಈ ಬಗ್ಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸಮಾಜವಾದಿ ಹಿನ್ನೆಲೆಯಿಂದ ಬಂದಿದ್ದೇನೆ ಎಂದು ಹೇಳಿಕೊಳ್ಳುತ್ತಾರೆ. ಪದೇ ಪದೇ ನೈತಿಕತೆ ಬಗ್ಗೆ ಮಾತನಾಡುತ್ತಾರೆ.
ಈ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ. ಬಳಿಕ ಅವರು ತನಿಖೆ ಎದುರಿಸಲಿ. ಆದರೆ ಈ ವಿಷಯದಲ್ಲಿ ಸಿದ್ದರಾಮಯ್ಯ ಭಂಡತನ ಪ್ರದರ್ಶನ ಮಾಡಬಾರದು ಎಂದು ಕಿವಿಮಾತು ಹೇಳಿದರು.