ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.
ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾದರಿ ರಾಜಕಾರಿಣಿಯಾಗಿದ್ದಾರೆ. ಆಗಿದ್ದರೂ ಅವರಿಂದ ತಪ್ಪು ಆಗಿದೆ. ಅಲ್ಲದೇ ಅದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಡಾ ನಿವೇಶನಗಳನ್ನು ವಿಧಾನಸಭೆ ಅಧಿವೇಶನ ನಡೆಯುವಾಗಲೇ ವಾಪಾಸ್ ನೀಡಿದ್ದರೆ ಎಲ್ಲವೂ ಮುಗಿಯುತ್ತಿತ್ತು. ಆದರೆ ಇದೀಗ ಮೈಸೂರು ಲೋಕಾಯುಕ್ತ ಹಾಗೂ ಇ.ಡಿ ದೂರು ದಾಖಲಿಸಿ ತನಿಖೆ ನಡೆಸುತ್ತಿರುವ ವೇಳೆ ಸೈಟ್ ವಾಪಸ್ ನೀಡಿರುವುದು ಸರಿಯಲ್ಲ. ಹೀಗಾಗಿ ಅವರ ಮುಂದಿರೋದು ರಾಜೀನಾಮೆಯೊಂದೇ ದಾರಿ ಎಂದರು.
ಸಿದ್ದರಾಮಯ್ಯ ಅವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದ್ದರೆ, ಅವರ ಇತಿಹಾಸವನ್ನು ತಿಳಿಯಬೇಕಿದ್ದರೆ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತನಿಖೆಯ ನಂತರ ಆರೋಪ ಮುಕ್ತವಾದರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿ. ಪಕ್ಷ ಅವರ ಮೇಲೆ ಗೌರವ ಇಟ್ಟಿದ್ದರೆ ಮುಖ್ಯಮಂತ್ರಿ ಮಾಡಲಿ. ನಾವೇ ಆಗ ಅಭಿನಂದನೆ ತಿಳಿಸುತ್ತೇವೆ ಎಂದರು.
ಬೆಂಗಳೂರು: ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 5.46,698 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕರ್ನಾಟಕಕ್ಕೆ ಮೊದಲ ಬಾರಿ ಶೇ.86.48ರಷ್ಟು ಫಲಿತಾಂಶ ಬಂದಿದೆ…
ದಾವಣಗೆರೆ/ಬಾಗಲಕೋಟೆ: ರಾಜ್ಯದ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಇಂದು ಮತದಾನ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.…
ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್…
ಬೆಂಗಳೂರು: ನಗರದಲ್ಲಿ ಮುಂದಿನ ಮೂರು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಬಿಸಿ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಜನರಿಗೆ ಆರು ಗ್ಯಾರಂಟಿಗಳನ್ನು ನೀಡುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.…
ಮುಂಬೈ: ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಭಾರತದ ಧ್ವಜ ಹೊಂದಿರುವ 15,400 ಟನ್ ಎಲ್‌ಪಿಜಿ ಹೊತ್ತ ಟ್ಯಾಂಕರ್ ಹಾರ್ಮುಜ್ ಜಲಸಂಧಿಯನ್ನು…