ರಾಜ್ಯ

ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಕೇಂದ್ರ ಸಚಿವ ವಿ.ಸೋಮಣ್ಣ

ಹುಬ್ಬಳ್ಳಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಒಂದು ತಪ್ಪು ಮಾಡಲು ಹೋಗಿ 50 ತಪ್ಪು ಮಾಡಿ, ರಾಜೀನಾಮೆ ಕೊಡೋದು ಬಿಟ್ಟು ಕಾಗಕ್ಕ, ಗುಬ್ಬಕ್ಕನ ಕಥೆ ಹೇಳುತ್ತಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಆರೋಪಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರೊರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಒಬ್ಬ ಮಾದರಿ ರಾಜಕಾರಿಣಿಯಾಗಿದ್ದಾರೆ. ಆಗಿದ್ದರೂ ಅವರಿಂದ ತಪ್ಪು ಆಗಿದೆ. ಅಲ್ಲದೇ ಅದನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. ಮುಡಾ ನಿವೇಶನಗಳನ್ನು ವಿಧಾನಸಭೆ ಅಧಿವೇಶನ ನಡೆಯುವಾಗಲೇ ವಾಪಾಸ್‌ ನೀಡಿದ್ದರೆ ಎಲ್ಲವೂ ಮುಗಿಯುತ್ತಿತ್ತು. ಆದರೆ ಇದೀಗ ಮೈಸೂರು ಲೋಕಾಯುಕ್ತ ಹಾಗೂ ಇ.ಡಿ ದೂರು ದಾಖಲಿಸಿ ತನಿಖೆ ನಡೆಸುತ್ತಿರುವ ವೇಳೆ ಸೈಟ್‌ ವಾಪಸ್‌ ನೀಡಿರುವುದು ಸರಿಯಲ್ಲ. ಹೀಗಾಗಿ ಅವರ ಮುಂದಿರೋದು ರಾಜೀನಾಮೆಯೊಂದೇ ದಾರಿ ಎಂದರು.

ಸಿದ್ದರಾಮಯ್ಯ ಅವರು ಮುಂದಿನ ಪೀಳಿಗೆಗೆ ಮಾದರಿಯಾಗಬೇಕಿದ್ದರೆ, ಅವರ ಇತಿಹಾಸವನ್ನು ತಿಳಿಯಬೇಕಿದ್ದರೆ ತಕ್ಷಣ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ತನಿಖೆಯ ನಂತರ ಆರೋಪ ಮುಕ್ತವಾದರೆ ಮತ್ತೊಮ್ಮೆ ಮುಖ್ಯಮಂತ್ರಿ ಆಗಿ ಮುಂದುವರೆಯಲಿ. ಪಕ್ಷ ಅವರ ಮೇಲೆ ಗೌರವ ಇಟ್ಟಿದ್ದರೆ ಮುಖ್ಯಮಂತ್ರಿ ಮಾಡಲಿ. ನಾವೇ ಆಗ ಅಭಿನಂದನೆ ತಿಳಿಸುತ್ತೇವೆ ಎಂದರು.

 

 

ಆಂದೋಲನ ಡೆಸ್ಕ್

Recent Posts

ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…

1 min ago

ಕಾಡಾನೆ ದಾಳಿ: ರೈತ ಸಾವು

ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…

23 mins ago

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

4 hours ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

4 hours ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

4 hours ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

4 hours ago