ಬೆಂಗಳೂರು : ರಾಜ್ಯ ಸರ್ಕಾರ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ 716 ಕೋಟಿ ರೂ. ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಬಿಡುಗಡೆ ಮಾಡುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಲಾಗುತ್ತಿತ್ತು.
ಹೀಗಾಗಿ ಪ್ರತಿನಿತ್ಯ 26 ಲಕ್ಷ ರೈತರಿಂದ 85 ಲಕ್ಷ ಲೀಟರ್ ಹಾಲು ಸಂಗ್ರಹವಾಗುತ್ತಿತ್ತು. ಆದರೆ ಕಾಂಗ್ರೆಸ್ ಸರ್ಕಾರ 716 ಕೋಟಿ ಬಾಕಿ ಹಣ ಉಳಿಸಿಕೊಂಡಿದೆ. ಇದರಿಂದ ರಾಜ್ಯದಲ್ಲಿ 10 ಲಕ್ಷ ಲೀಟರ್ ಹಾಲು ಸಂಗ್ರಹ ಕಡಿಮೆಯಾಗಿದೆ.
ಜನ ಅಷ್ಟೇ ಅಲ್ಲ ಜಾನುವಾರುಗಳು ಕೂಡ ಸರ್ಕಾರದ ಮೇಲೆ ಶಾಪ ಹಾಕುತ್ತಿವೆ. ರಾಜ್ಯ ಸರ್ಕಾರ ಜಾನುವಾರುಗಳ ಕೋಪಕ್ಕೂ ಬಲಿಯಾಗಿದೆ ಎಂದು ಕಿಡಿಕಾರಿದರು.
ರಾಜ್ಯ ಸರ್ಕಾರ ತನ್ನ ಹೊಣೆ ಮರೆತು ಕೇಂದ್ರದ ಕಡೆ ಕೈ ತೋರಿಸುತ್ತದೆ. ಬಾಕಿ ಉಳಿಸಿಕೊಂಡಿರುವ ಪ್ರೋತ್ಸಾಹ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು.
ಜನ ಮತ್ತು ಜಾನುವಾರುಗಳ ಜೊತೆ ಹೋರಾಟ ಮಾಡಬೇಕಾಗುತ್ತದೆ ಪದೇ ಪದೇ ಬಿಜೆಪಿಯವರಿಗೆ ಮಾನ ಮರ್ಯಾದೆ ಇಲ್ಲವೆಂದು ಟೀಕಿಸುತ್ತಾರೆ ನಾನು ಆ ಪದ ಬಳಸಲ್ಲ ಸರ್ಕಾರ ಕೂಡಲೇ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…
ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…