ಬೆಂಗಳೂರು: ಅಧಿಕಾರ ದುರುಪಯೋಗ ಆರೋಪದಡಿ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್‌ರಿಗೆ ಬಿಜೆಪಿ ದೂರು ನೀಡಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದವರು ಸಿದ್ಧಾರ್ಥ ವಿಹಾರ ಶಿಕ್ಷಣ ಟ್ರಸ್ಟ್‌ಗೆ ಕೆಐಎಡಿಬಿಯಿಂದ ಐದು ಎಕರೆ ಜಾಗ ಪಡೆದುಕೊಂಡಿದ್ದಾರೆ. ಈ ಮೂಲಕ ಸಚಿವರಾಗಿ ಪ್ರಿಯಾಂಕ್ ಖರ್ಗೆ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿ, ಜಮೀನು ವಾಪಸ್ ಪಡೆಯಬೇಕು ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಇಂದು ರಾಜ್ಯಪಾಲರನ್ನು ಭೇಟಿ ಮಾಡಿ ದೂರು ಸಲ್ಲಿಸಿದ್ದಾರೆ.
ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಬಿಜೆಪಿ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಚಿವ ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದೆ.