ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಯದೆ ಹಗರಣ ನಡೆದಿಲ್ಲ ಎಂಬುದು ಹೈಕೋರ್ಟ್ ತೀರ್ಪಿನಿಂದ ಸ್ಪಷ್ಟವಾಗಿದೆ. ಮುಡಾ ಹಗರಣದಲ್ಲಿ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ಕೋರ್ಟ್ ಆದೇಶಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ತಮ್ಮ ಭಂಡತನದಿಂದ ಹೊರಬರುತ್ತಿಲ್ಲ ಎಂದು ಕಿಡಿಕಾರಿದರು.
ಕಾಂಗ್ರೆಸ್ ನಾಯಕರು ರಾಜಭವನದ ವಿರುದ್ಧ ಮಾತನಾಡಿದ್ದಾರೆ. ಅಲ್ಲದೇ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಪ್ಪು ಮಾಡಿಲ್ಲ ಎಂದು ಹೇಳುತ್ತಾರೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರ ಇರುವುದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.
ಮೈಸೂರು : ಸಂಕ್ರಾಂತಿ ಹೊಸ್ತಿಲಲ್ಲಿ ಮೈಸೂರಿನಲ್ಲಿ ನಡೆಯುವ ಕಲಾ ಹಬ್ಬವಾದ ಬಹುರೂಪಿ ನಾಟಕೋತ್ಸವವಕ್ಕೆ ಮುನ್ನುಡಿ ಬರೆದು ‘ಜಾನಪದ ಉತ್ಸವ’ ರಂಗಾಯಣದಲ್ಲಿ…
ರಸಪ್ರಶ್ನೆ ಕಾರ್ಯಕ್ರಮದ ಸಮಾರಂಭದಲ್ಲಿ ಡಾ.ಚಿದಾನಂದ ಗೌಡ ಮಾಹಿತಿ ಕುಶಾಲನಗರ : ಕುವೆಂಪುರವರ ಉದಯರವಿ ಮನೆಯನ್ನು ಸಂಗ್ರಹಾಲಯ ಮಾಡುವ ಬಗ್ಗೆ ಚಿಂತನೆ…
ಹನೂರು : ತಾಲ್ಲೂಕಿನ ಮಹದೇಶ್ವರ ಬೆಟ್ಟದ ಮಾರ್ಗಮಧ್ಯ ರಂಗಸ್ವಾಮಿ ಒಡ್ಡಿನ ಬಳಿ ತಡೆಗೋಡೆಯ ಮೇಲೆ ಚಿರತೆ ಮತ್ತು ಅದರ ಎರಡು…
ನಂಜನಗೂಡು : ದ್ವೇಷ ಮರೆತು, ಪ್ರೀತಿ ಗಳಿಸುವಂತೆ ಕೆಲಸ ಮಾಡಿ ಜೀವನ ನಡೆಸಬೇಕು ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ…
ಬೆಂಗಳೂರು : ನಟ ಯಶ್ ಅವರು ‘ಟ್ಯಾಕ್ಸಿಕ್’ ಸಿನಿಮಾದ ಟೀಸರ್ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಟೀಸರ್ ನಲ್ಲಿನ ಕಾರು…
ಸೋಮನಾಥ : ಗುಜರಾತ್‌ನ ಗಿರ್ ಸೋಮನಾಥ ಜಿಲ್ಲೆಯ ಸೋಮನಾಥ ದೇವಾಲಯದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಆಯೋಜಿಸಲಾದ ವಿಧ್ಯುಕ್ತ…