ರಾಜ್ಯ

ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ, ತನಿಖೆಗೆ ಅವಕಾಶ ನೀಡಿದ್ದರೂ ಸಹ ಸಿಎಂ ಹುದ್ದೆಗೆ ರಾಜೀನಾಮೆ ನೀಡದೆ ಭಂಡತನ ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿಳಿಯದೆ ಹಗರಣ ನಡೆದಿಲ್ಲ ಎಂಬುದು ಹೈಕೋರ್ಟ್‌ ತೀರ್ಪಿನಿಂದ ಸ್ಪಷ್ಟವಾಗಿದೆ. ಮುಡಾ ಹಗರಣದಲ್ಲಿ ಸಮಗ್ರ ತನಿಖೆಯ ಅವಶ್ಯಕತೆ ಇದೆ ಎಂದು ಕೋರ್ಟ್‌ ಆದೇಶಿಸಿದೆ. ಹೀಗಿದ್ದರೂ ಸಿದ್ದರಾಮಯ್ಯ ತಮ್ಮ ಭಂಡತನದಿಂದ ಹೊರಬರುತ್ತಿಲ್ಲ ಎಂದು ಕಿಡಿಕಾರಿದರು.

ಕಾಂಗ್ರೆಸ್‌ ನಾಯಕರು ರಾಜಭವನದ ವಿರುದ್ಧ ಮಾತನಾಡಿದ್ದಾರೆ. ಅಲ್ಲದೇ ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ತಪ್ಪು ಮಾಡಿಲ್ಲ ಎಂದು ಹೇಳುತ್ತಾರೆ. ಮುಡಾ ಹಗರಣದಲ್ಲಿ ಸಿಎಂ ಪಾತ್ರ ಇರುವುದು ಸಾಬೀತಾಗಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲೇಬೇಕು ಎಂದು ಆಗ್ರಹಿಸಿದರು.

 

ಆಂದೋಲನ ಡೆಸ್ಕ್

Recent Posts

ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: 9 ಮಂದಿಗೆ ಗಾಯ

ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…

5 hours ago

ಹುಬ್ಬೆ ಹುಣಸೆ ಡ್ಯಾಂ ಭರ್ತಿ, ಇದು ಮಾದಪ್ಪನ ಕೃಪೆ ಎಂದ ಶಾಸಕ ಮಂಜುನಾಥ್

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…

5 hours ago

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

9 hours ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

9 hours ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

9 hours ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

9 hours ago