ರಾಜ್ಯ

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನೇತೃತ್ವದ ಸಂಪುಟ¸ದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿ ಗುರುವಾರ ಬೆಂಗಳೂರಿನಲ್ಲಿ ವಿವಿಧ ದಲಿತ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿದವು.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮೈಸೂರು,ಚಾಮರಾಜನಗರ ಸೇರಿದಂತೆ ರಾಜ್ಯದ ಭಾಗಗಳಿಂದ ಆಗಮಿಸಿದ್ದ ಸಾವಿರಾರು ದಲಿತ ಮುಖಂಡರು ಹಾಗೂ ಮಹಾದೇವಪ್ಪ ಅವರ ಅಭಿಮಾನಿಗಳು ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಸರ್ಕಾರ ಸಾಮಾಜಿಕ ನ್ಯಾಯ ಎತ್ತಿ ಹಿಡಿಯಬೇಕೆಂದು ಒತ್ತಾಯಿಸಿದರು.

‘ಶೋಷಿತರ ಸ್ವಾಭಿಮಾನದ ಹೋರಾಟ’ ಎಂಬ ಹೆಸರಿನಲ್ಲಿ ನಡೆದ ರಾಜ್ಯಮಟ್ಟದ ಪ್ರತಿಭಟನೆಗೆ ದಲಿತ ಸಂಘಟನೆಗಳ ಹತ್ತಾರು ನಾಯಕರು, ಕರ್ನಾಟಕದ ಛಲವಾದಿ ಮಹಾಸಭಾದ ಪದಾಧಿಕಾರಿಗಳು ಬೆಂಬಲ ವ್ಯಕ್ತಪಡಿಸಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. ದಲಿತ ಸಮುದಾಯಕ್ಕೆ ನ್ಯಾಯ ಒದಗಿಸುವಂತೆ ಪ್ರತಿಭಟನೆಗೆ ಕರೆ ಕೊಟ್ಟಿದ್ದೇವೆ. ನಮ್ಮ ಬೇಡಿಕೆ ಈಡೇರಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ಮಾಡಲಾಗುವುದು. ಬರುವ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಕಾಂಗ್ರೆಸ್ಸಿನ ದಲಿತ ವಿರೋಧಿ ನೀತಿಗೆ ಮತಗಳ ಮೂಲಕ ತಕ್ಕ ಪಾಠ ಕಲಿಸಲಾಗುವುದು ಎಂದು ಸಂಘಟನೆಗಳ ಮುಖಂಡರು, ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ಸಹಭಾಗಿತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಾದೇವಪ್ಪ ಅವರಿಗೆ ಸಚಿವ ಸ್ಥಾನ ನೀಡದಿದ್ದರೆ ಕಾಂಗ್ರೆಸ್ ಸರ್ಕಾರ ಈ ಸಮುದಾಯದ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.

ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಹಾಗೂ ಕರ್ನಾಟಕ ರಾಜ್ಯ ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯಾಧ್ಯಕ್ಷ ಹೆಚ್.ಸಿ ಸಿದ್ದಲಿಂಗಯ್ಯ ಅವರ ಮುಂದಾಳತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಹಾದೇವಪ್ಪ ಪರ ಜೈಕಾರದ ಘೋಷಣೆಗಳನ್ನು ಕೂಗಿ ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವರ ಹಿರಿತನಕ್ಕೆ ತಕ್ಕಂತೆ ಸ್ಥಾನಮಾನ ನೀಡಬೇಕೆಂದು ಪ್ರತಿಭಟನಕಾರರು ಸರ್ಕಾರಕ್ಕೆ ಒತ್ತಾಯ ಮಾಡಿದರು.

ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಅಂಬೇಡ್ಕರ್, ಮತ್ತೊಂದು ಕಡೆ ಮಹಾದೇವಪ್ಪ ಭಾವಚಿತ್ರ ಹಿಡಿದುಕೊಂಡು ಮಹಾದೇವಪ್ಪ ಅವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡದಿರುವುದು ಇಡೀ ದಲಿತ ಸಮೂದಾಯಕ್ಕೆ ಮಾಡಿದ ಅಪಮಾನ. ಕೂಡಲೇ ಈ ಅನ್ಯಾಯವನ್ನು ಸರಿಪಡಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉರಿಲಿಂಗ ಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮೀಜಿ ಮಾತನಾಡಿ, ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ನೂತನ ಸಚಿವ ಸಂಪುಟ ರಚನೆಯಾಗಿದೆ. ಕಾಂಗ್ರೆಸ್ಸಿನ ಬೆನ್ನೆಲುಬಾಗಿ ನಿಲ್ಲುತ್ತಾ ಬಂದಿರುವ ದಲಿತ ಸಮುದಾಯದ ರಾಜಕೀಯ ನಾಯಕರನ್ನು ತುಳಿಯುವ ಕೆಲಸವಾಗುತ್ತಿದೆ. ದಿ. ಬಿ. ಬಸವಲಿಂಗಪ್ಪ, ಕೆ.ಎಚ್. ರಂಗನಾಥ್, ಬಿ.ರಾಚಯ್ಯ, ಎನ್. ರಾಚಯ್ಯ, ಶ್ರೀನಿವಾಸ್ ಪ್ರಸಾದ್ ಮತ್ತು ಟಿ.ಎ. ನರಸಿಂಹಮೂರ್ತಿ ಅವರಂತಹ ಹತ್ತಾರು ಪ್ರಭಾವಿ ಮುಖಂಡರಿಗೆ ಈ ಹಿಂದೆ ಅನ್ಯಾಯ ಮಾಡಲಾಗಿತ್ತು. ಈಗ ಮಲ್ಲಿಕಾರ್ಜುನ ಖರ್ಗೆ, ಡಾ.ಜಿ. ಪರಮೇಶ್ವರ್, ಡಾ. ಎಚ್.ಸಿ. ಮಹದೇವಪ್ಪ ಹಾಗೂ ಕೆ.ಎಚ್. ಮುನಿಯಪ್ಪ ಅವರಂತಹ ಹಿರಿಯ ನಾಯಕರನ್ನು ಸಿಎಂ ಹುದ್ದೆಗೆ ಪರಿಗಣಿಸದೆ ಕಾಂಗ್ರೆಸ್ ಸತತವಾಗಿ ದಲಿತ ವಿರೋಧಿ ಧೋರಣೆ ಮುಂದುವರಿಸಲಾಗಿದೆ ಎಂದು ಅಸಮಾಧಾನ ಹೊರಹಾಕಿದರು.

ಸಂವಿಧಾನ, ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಮಾಜದ ಏಳಿಗೆಗಾಗಿ ಶ್ರಮಿಸಿದ ಹಿರಿಯ ದಲಿತ ನಾಯಕರ ಕೊರತೆ ಇಂದು ರಾಜ್ಯ ರಾಜಕಾರಣದಲ್ಲಿ ಎದ್ದು ಕಾಣುತ್ತಿದೆ. ದಶಕಗಳಿಂದ ಕಾಂಗ್ರೆಸ್ ನಂಬಿ ಮತ ಹಾಕುತ್ತಾ ಬಂದಿರುವ ದಲಿತ ಸಮುದಾಯಕ್ಕೆ ಸದಾ ವಂಚನೆ ಎದುರಾಗುತ್ತಿದೆ. ಉನ್ನತ ಹುದ್ದೆಗಳ ಆಮಿಷ ಒಡ್ಡಿ ಪ್ರಭಾವಿ ದಲಿತ ನಾಯಕರನ್ನು ರಾಜಕೀಯವಾಗಿ ಮುಗಿಸುವ ಹುನ್ನಾರ ನಡೆಯುತ್ತಿದೆ. ವಿಶೇಷವಾಗಿ ಹಳೇ ಮೈಸೂರು ಭಾಗದಲ್ಲಿ ಹಾಗೂ ಇಡೀ ರಾಜ್ಯಾದ್ಯಂತ ದಲಿತ ಸಂಘಟನೆಗಳಿಗೆ ತಾಯಿಯಂತೆ ಬೆನ್ನೆಲುಬಾಗಿ ನಿಂತಿದ್ದ ಹಿರಿಯ ನಾಯಕರಾದ ಎಚ್.ಸಿ. ಮಹದೇವಪ್ಪನವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿರುವುದು ಅತ್ಯಂತ ದುರದೃಷ್ಟಕರ ಸಂಗತಿಯಾಗಿದೆ. ಸಮುದಾಯದ ನಾಯಕತ್ವವನ್ನು ಹತ್ತಿಕ್ಕುವ ಮತ್ತು ನಾಶಮಾಡುವ ವ್ಯವಸ್ಥಿತ ಪ್ರಯತ್ನವಾಗಿದೆ. ನಾಯಕತ್ವ ನಾಶವಾದರೆ ಇಡೀ ಸಮುದಾಯವೇ ಅಸ್ತಿತ್ವ ಕಳೆದುಕೊಳ್ಳುತ್ತದೆ ಎಂದು ಸ್ವಾಮೀಜಿ ಎಚ್ಚರಿಸಿದರು.

 

ಆಂದೋಲನ ಡೆಸ್ಕ್

Recent Posts

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

5 mins ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

5 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

5 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

5 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

5 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

5 hours ago