Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು: ಸಿ.ಟಿ.ರವಿ ಆಗ್ರಹ

ಬೆಂಗಳೂರು: ಇಂದು ಹೈಕೋರ್ಟ್ ತೀರ್ಪು ಹೊರಬಿದ್ದಿದ್ದು, ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ದಾರಿ ಒಂದೇ ಇರುವುದು ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದ ವಿರುದ್ಧ ಬಿಜೆಪಿ ನಡೆಸಿದ ಹೋರಾಟಕ್ಕೆ ಜಯ ಸಿಕ್ಕಿದೆ. ಸತ್ಯಮೇವ ಜಯತೇ ಎಂದು ಹೇಳಿದರು. ರಾಜ್ಯಪಾಲರು, ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದೆ ಸಂವಿಧಾನ ಬಾಹಿರ ಅಪರಾಧ ಎಂದು ಆರೋಪಿಸಿದ್ದರು. ಹೀಗಾಗಿ ಸಾರ್ವಜನಿಕರಲ್ಲಿ ಸಾಂವಿಧಾನಿಕ ಹುದ್ದೆಗೆ ಅಗೌರವಿಸಿದ ಕಾರಣ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ಇನ್ನು ಸಿದ್ದುಗೆ ಬೇರೆ ದಾರಿನೇ ಇಲ್ಲ. ಅವರೇ ಸ್ವತಃ ಕಾನೂನು ಪಂಡಿತರು. ಒಬ್ಬ ಸಾಮಾನ್ಯ ಮುಖ್ಯಮಂತ್ರಿ ಕಾಸ್ಟ್ಲಿಲಾಯರನ್ನು ಕರೆಸಿ ವಾದ ಮಂಡಿಸಿದರು. ಆದರೆ ಸತ್ಯ ಮುಚ್ಚಿಡಲು ಸಾಧ್ಯವಿಲ್ಲ. ಸುಳ್ಳು ಎಂದಿಗೂ ಸತ್ಯವಾಗಲ್ಲ. ಸುಳ್ಳು ಹಿಡಿದುಕೊಂಡು ಹೋದರೆ ನಗೆ ಪಾಟಲಿಗೆ ಈಡಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

ಇನ್ನು ಸಿಎಂ ಸಿದ್ದರಾಮಯ್ಯ ಇನ್ನು ಜಾಸ್ತಿ ಬಂಡತನ ಮಾಡದೆ ರಾಜೀನಾಮೆ ನೀಡಿ ಕರ್ನಾಟಕದ ಘನತೆಯನ್ನು ಎತ್ತಿ ಹಿಡಿಯಬೇಕು ಎಂದು ಆಗ್ರಹಿಸಿದರು.

Tags:
error: Content is protected !!