ರಾಜ್ಯ

ಪ್ರಜಾಪ್ರಭುತ್ವ ದಿನಾಚರಣೆ: ವಿಶ್ವ ದಾಖಲೆಯ ಮಾನವ ಸರಪಳಿ ನಿರ್ಮಾಣ

ಬೆಂಗಳೂರು:ವಿಶ್ವ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ 2500 ಕಿ.ಮೀ. ಉದ್ದದ ಮಾನವ ಸರಪಳಿಯನ್ನು ರಾಜ್ಯಾದ್ಯಂತ ನಿರ್ಮಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಲು
ಸರಕಾರ ಮುಂದಾಗಿದೆ.

ರಾಜ್ಯದ ಗಡಿ ಜಿಲ್ಲೆಗಳಾದ ಬೀದರ್ ಜಿಲ್ಲೆಯಿಂದ ಚಾಮರಾಜನಗರದ ವರೆಗೂ ಸಮಾಜದ ಎಲ್ಲಾ ವರ್ಗದ ಜನರೂ ಸೇರಿದಂತೆ ಸುಮಾರು 25 ಲಕ್ಷ ಮಂದಿ ಕೈಕೈ ಹಿಡಿದು ರಾಜ್ಯದುದ್ದಕ್ಕೂ ವಿಶ್ವದ ಬೃಹತ್ ಮಾನವ ಸರಪಳಿ ನಿರ್ಮಿಸಲಿದ್ದಾರೆ.

ಇದೇವೇಳೆ ಸಂವಿಧಾನದ ಮಹತ್ವ ಸಾರುವ ಪ್ರಸ್ತಾವನೆ ಓದುವುದು ಹಾಗೂ ಪ್ರಜಾಪ್ರಭುತ್ವದ ರಕ್ಷಣೆಯ ಹೊಣೆಗಾರಿಕೆ ನೆನಪಿಸುವ ಜಾಗೃತಿ ಮೂಡಿಸಲಿದ್ದಾರೆ. ಹಾಗೆಯೇ, ಸುತ್ತಮುತ್ತ ಪ್ರದೇಶದಲ್ಲಿ ಗಿಡಗಳನ್ನೂ ನೆಡಲಿದ್ದಾರೆ. ಈ ಮೂಲಕ ಅಂದು ರಾಜ್ಯಾದ್ಯಂತ 10ಲಕ್ಷ ಗಿಡಗಳನ್ನು ಹಾಕಲಾಗುತ್ತದೆ.

ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ರಾಜ್ಯ 32 ಇಲಾಖೆಗಳ ಸುಮಾರು 8 ಲಕ್ಷಕ್ಕೂ ಅಧಿಕ ಸಿಬ್ಬಂದಿ ಇಡೀ ಕಾರ್ಯಕ್ರಮಕ್ಕಾಗಿ ಶ್ರಮಿಸುತ್ತಿದ್ದು, ಇಲಾಖೆ ಸಚಿವರಾದ ಡಾ. ಹೆಚ್. ಸಿ. ಮಹಾದೇವಪ್ಪ ಹೆಚ್ಚಿನ ಆಸಕ್ತಿ ವಹಿಸಿ ಸಿದ್ಧತೆಗಳನ್ನು ನಡೆಸಿದ್ದಾರೆ. ಈ ವಿನೂತನ ಮತ್ತು ಬೃಹತ್ ಕಾರ್ಯಕ್ರಮಕ್ಕೆ ಲಂಡನ್ ನ ವಿಶ್ವ ದಾಖಲೆ ಪರಿಶೀಲಿಸುವ ತಂಡ ಆಗಮಿಸಲಿದ್ದು, ಎಲ್ಲವೂ ದಾಖಲೆಗಳ ನಿಯಮದಂತಿರುವುದನ್ನು ವಿವಿಧ ಹಂತಗಳಲ್ಲಿ ಅಧ್ಯಯನ ಮಾಡಲಿದೆ. ನಂತರ ಕಾರ್ಯಕ್ರಮ ದಾಖಲೆಗಳ ನಿಯಮಕ್ಕೆ ಒಪ್ಪುವಂತೆ ಇದ್ದರೆ ಕಾರ್ಯಕ್ರಮವನ್ನು ವಿಶ್ವ ದಾಖಲೆಗೆ ಸೇರಿಸಲಿದೆ. ಇದೆಲ್ಲದಕ್ಕೂ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಅವರು ತಮ್ಮದೇ ರೀತಿಯಲ್ಲಿ ವಿಶೇಷ ವ್ಯವಸ್ಥೆ ಮಾಡಿದ್ದಾರೆ. ಹಾಗೆಯೇ ಡ್ರೋನ್ ಚಿತ್ರೀಕರಣ ಹಾಗೂ ಪ್ರತಿ ಜಿಲ್ಲೆಯ ತಾಲೂಕುಗಳ ಮಾಹಿತಿಗಳು ಕ್ಷಣಕ್ಷಣದಲ್ಲಿ ಲಭ್ಯವಾಗಿ ಆಯೋಜಕರ ನಡುವೆ ಸಂಪೂರ್ಣ ಸಮನ್ವಯದೊಂದಿಗೆ ನಡೆಯುವಂತೆ ಮಾಡುವ ವಿಶೇಷ ಸುಧಾರಿತ ತಂತ್ರಜ್ಞಾನದ ಜಾಲವೊಂದರ ಸಿದ್ಧತೆ ನಡೆಸಿದ್ದಾರೆ.

ಈ ವಿಶೇಷ ಮಾನವ ಸರಪಳಿ ಪ್ರತಿ ಜಿಲ್ಲೆ, ತಾಲೂಕು ಹಾಗೂ ಪ್ರಮುಖ ಗ್ರಾಮಗಳಲ್ಲಿ ಹಾದು ಹೋಗುವ ಹೆದ್ದಾರಿಗಳಲ್ಲಿ ಹಾದು ಹೋಗಲಿದ್ದು, ಎಲ್ಲಾ ಹಳ್ಳಿಗಳಲ್ಲೂ ಇದೊಂದು ಹಬ್ಬದಂತೆ ಆಚರಿಸುವಂತೆ ಮಾಡಲು ಸರಕಾರ ಸಕಲ ರೀತಿಯಲ್ಲಿ ಸಿದ್ಧತೆ ನಡೆಸಿದೆ.

3 ಕೋಟಿ ಜನರ ಬೆಂಬಲದ ನಿರೀಕ್ಷೆ:

ವಿಶ್ವಸಂಸ್ಥೆ 2007ರ ಸೆ.15 ಅನ್ನು ವಿಶ್ವ ಪ್ರಜಾಪ್ರಭುತ್ವದ ದಿನ ಎಂದು ಘೋಷಿಸಿತ್ತು. ಇದರ ಅಂಗವಾಗಿ ಅನೇಕ ದೇಶಗಳಲ್ಲಿ ಅಂದು ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿವೆ. ಆದರೆ ಇದರ ಮೌಲ್ಯವನ್ನು ಹೆಚ್ಚು ಪ್ರಚಾರ ಮಾಡಿ ವಿಶ್ವ ಮಟ್ಟದಲ್ಲಿ ಸಾರುವ ಪ್ರಯತ್ನಕ್ಕೆ ಸರಕಾರ ಈ ಹಿಂದೆಯೇ ಕೈ ಹಾಕಿತ್ತು. ಹೀಗಾಗಿ ಕಳೆದ ವರ್ಷ 2023 ಸೆ.15ರಂದು ರಾಜ್ಯಾದ್ಯಂತ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಕಾರ್ಯಕ್ರಮ ನಡೆಸಲಾಗಿತ್ತು. ಇದರಲ್ಲಿ ಸುಮಾರು 2.3 ಕೋಟಿ ಭಾಗವಹಿಸಿ ಸರಕಾರಕ್ಕೆ ಆಶ್ಚರ್ಯ ಉಂಟು ಮಾಡಿದ್ದರು. ಇದರಿಂದ ಸ್ಫೂರ್ತಿ ಪಡೆದ ಸರಕಾರ ಈ ಬಾರಿ 25 ಲಕ್ಷ ಜನರು ರಾಜ್ಯದುದ್ದಕ್ಕೂ ನಿಂತು ಸಂವಿಧಾನ ಓದುವಂತೆ ಮಾಡುತ್ತಿದೆ. ಹೀಗಾಗಿ ಇದರಲ್ಲಿ ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸುಮಾರು 3 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದ್ದು, ಇದರಿಂದ ಇಡೀ ವಿಶ್ವ ಕರ್ನಾಕದ ಕಡೆ ನೋಡುವಂತಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಜಿಲ್ಲೆಗಳು ಸಕಲ ರೀತಿಯಲ್ಲಿ ಸಜ್ಜು:
ಭಾನುವಾರ ಬೆಳಗ್ಗೆ 9 ಗಂಟೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸೌಧದ ಮುಂಭಾಗದಲ್ಲಿ ಸಂವಿಧಾನದ ಪೀಠಿಕೆ ಓದುವ ಮೂಲಕ ಚಾಲನೆ ನೀಡಲಿದ್ದಾರೆ. ಆನಂತರ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲೆಗಳ ಸಮಸ್ತ ಜನರು ಸಂವಿಧಾನ ಪೀಠಿಕೆ ಓದಿ ಮಾನವ ಸರಪಳಿ ನಿರ್ಮಿಸುತ್ತಾರೆ. ಆ ಪ್ರದೇಶದಲ್ಲೇ ಗಿಡ ನೆಡುತ್ತಾರೆ. ಹೀಗಾಗಿ ಪ್ರತಿ ಜಿಲ್ಲೆ ತಾಲೂಕುಗಳಲ್ಲೂ ಕಾರ್ಯಕ್ರಮ ನಡೆಯಲಿದ್ದು, ದಕ್ಷಿಣ ಕನ್ನಡದಲ್ಲಿ ಕೆಲವರು ಸಮುದ್ರದಲ್ಲೇ ನಿಂತು ಮನವ ಸರಪಳಿ ರಚಿಸಲಿದ್ದಾರೆ.
ಇದೇರೀತಿ ವೇಷ, ಭೂಷಣ ಹಾಗೂ ವಿಶೇಷ ಸಂದೇಶ ಸಾರುವ ವಿಭಿನ್ನ ಪ್ರಯತ್ನ ಮಾಡಿದ ಜಿಲ್ಲೆಗೆ ಪ್ರಶಸ್ತಿಯನ್ನೂ ನೀಡಲಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

6 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

8 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

8 hours ago