ವಯನಾಡು: ಎಸ್‌ಐಆರ್ ಜಾರಿಯಿಂದ ಪ್ರಜಾಪ್ರಭುತ್ವ ದುರ್ಬಲವಾಗಲಿದೆ ಎಂದು ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಹಾರದಲ್ಲಿ ನಡೆಸಿದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಹೇಗೆ ಎಂಬುದನ್ನು ನೋಡಿದ್ದೇವೆ. ಕೇರಳದಲ್ಲಿ ಎಸ್‌ಐಆರ್ ನಡೆಸಲು ಚುನಾವಣಾ ಆಯೋಗ ಯೋಜಿಸಿದೆ. ಆದರೆ ಈ ಪ್ರಕ್ರಿಯೆಯನ್ನು ನಾವು ವಿರೋಧಿಸುತ್ತೇವೆ ಎಂದು ಹೇಳಿದ್ದಾರೆ.
ಬಿಹಾರದಲ್ಲಿ ಎಸ್‌ಐಆರ್ ಅನ್ನು ಹೇಗೆ ಜಾರಿ ಮಾಡಿದರು ಎಂಬುದನ್ನು ನೋಡಿದ್ದೇವೆ. ಅವರು ಪ್ರತಿ ರಾಜ್ಯದಲ್ಲೂ ಹಾಗೆ ಮಾಡಲಿದ್ದಾರೆ. ಅದು ಪ್ರಜಾಪ್ರಭುತ್ವಕ್ಕೆ ಮಾಡಿದ ಅವಮಾನ. ನಾವೆಲ್ಲರೂ ಇದರ ವಿರುದ್ಧ ಹೋರಾಡಬೇಕಾಗಿದೆ ಎಂದು ಕರೆ ನೀಡಿದರು.
ಇದನ್ನೂ ಓದಿ:-ಆಂತರಿಕ ಕಚ್ಚಾಟದಲ್ಲಿ ಸರ್ಕಾರ ಅಭಿವೃದ್ಧಿ ಮರೆತಿದೆ: ಬಿ.ವೈ.ವಿಜಯೇಂದ್ರ





